ಮಂಡ್ಯ: ‘ಕೃಷಿ ಪಂಪ್ಸೆಟ್ಗಳಿಗೆ ಹಗಲು ವೇಳೆ 7 ಗಂಟೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬೇಕು. ಈ ಹಿಂದೆ ಇದ್ದಂತೆಯೇ ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳ ಅಕ್ರಮ-ಸಕ್ರಮಕ್ಕೆ ರೈತರ ಪಾಲನ್ನು ಪಡೆದು ಉಳಿದ ಎಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತರು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ ಮತ್ತು ಜನ- ಜಾನುವಾರುಗಳ ಕುಡಿಯುವ ನೀರಿಗಾಗಿ ಕೆ.ಆರ್.ಎಸ್. ಹೇಮಾವತಿ ಅಣೆಕಟ್ಟೆಗಳ ಮೂಲಕ ನಾಲೆಗಳಿಗೆ ಕನಿಷ್ಠ ಎರಡು ಕಟ್ಟು ನೀರು ಹರಿಸಬೇಕು. ಆ ಮೂಲಕ ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.

‘ಪ್ರಕೃತಿ ವಿಕೋಪದಿಂದ ಬೆಳೆ ಹಾಗೂ ಮನೆಗಳಿಗೆ ಹಾನಿಯಾಗಿರುವ ಸಂಬಂಧ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಭತ್ತ ಕಟಾವು ಯಂತ್ರಗಳಿಗೆ ಜಿಲ್ಲೆಯಾದ್ಯಂತ ಏಕ ರೀತಿಯ (ಪ್ರತಿ ಗಂಟೆಗೆ ₹2200) ಬಾಡಿಗೆ ದರ ನಿಗದಿಪಡಿಸಬೇಕು. ಈ ಸಂಬಂಧ ಯಂತ್ರಗಳ ಮಾಲೀಕರು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಬ್ಯಾಂಕುಗಳು ಮತ್ತು ಮತ್ತು ಮೈಕ್ರೊ ಫೈನಾನ್ಸ್ ಹಾವಳಿ ತಡೆಗಾಗಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು. ಕೆ.ಆರ್. ಪೇಟೆಯಲ್ಲಿ ವಿದ್ಯುತ್ ಕೊರತೆ ನೀಗಿಸಲು ಕನಿಷ್ಠ ಎರಡು ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಸ್ತುವಾರಿ ಎನ್. ಚಲುವರಾಯಸ್ವಾಮಿ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎಸ್. ಲಿಂಗಪ್ಪಾಜಿ, ಖಜಾಂಚಿ ಎಸ್.ಕೆ. ರವಿಕುಮಾರ್ಗೌಡ ಮುಂತಾದವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-40-1056623772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.