ಮಂಡ್ಯ: ‘ಕೇಂದ್ರ ಸರ್ಕಾರವು ರಾಸಾಯನಿಕ ಗೊಬ್ಬರ ಬೆಲೆ ಹೆಚ್ಚಿಸಿ, ಯೂರಿಯಾ ಕೊರತೆ ಸೃಷ್ಟಿಸಿದೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ರಸಗೊಬ್ಬರದ ಬೆಲೆ ಏರಿಕೆ ಆದೇಶವನ್ನು ವಾಪಸ್ ಪಡೆದು ಸಹಾಯಧನ ಹೆಚ್ಚಳ ಮಾಡಿ ರಿಯಾಯಿತಿ ದರದಲ್ಲಿ ನೀಡಬೇಕು. ಕಡ್ಡಾಯ ಲಿಂಕ್ ಪದ್ಧತಿಯನ್ನು ಕೈಬಿಟ್ಟು ರೈತರು ತಮಗೆ ಬೇಕಾದ ಗೊಬ್ಬರವನ್ನು ಕೇಳಿದಾಗ ಮಾರಾಟಗಾರರು ಕಡ್ಡಾಯವಾಗಿ ಬೇರೆ ಗೊಬ್ಬರ ಅಥವಾ ಕೀಟನಾಶಕಗಳನ್ನು ತೆಗೆದುಕೊಳ್ಳಬೇಕೆಂಬ ಒತ್ತಾಯ ಮಾಡಬಾರದು ಎಂದು ಆಗ್ರಹಿಸಿದರು.

ರೈತರು ಕೇಳಿದ ಗೊಬ್ಬರವನ್ನು ವಿತರಿಸುವಂತೆ ಆದೇಶ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ತಕ್ಷಣ ವಾಪಸ್ ಪಡೆಯಬೇಕು. ರಿಯಾಯಿತಿ ದರದಲ್ಲಿ ಕೃಷಿ ಚಟುವಟಿಕೆಗೆ ಡೀಸೆಲ್ ಪೂರೈಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರವು ಮಾತಿನಂತೆ ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿ ಮಾಡಿ, ಕನಿಷ್ಠ ಬೆಂಬಲವನ್ನು ಖಾತ್ರಿಗೊಳಿಸಬೇಕು. ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ಹೇಳಿದಂತೆ ತನ್ನ ಪ್ರಣಾಳಿಕೆಯಂತೆ ರೈತ ವಿರೋಧಿ ಮೂರು ಕಾಯಿದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹ ಪಡಿಸಿದರು.

ಮುಖಂಡರಾದ ಬೋರಾಪುರ ಶಂಕರೇಗೌಡ, ರವಿಕುಮಾರ್, ಲತಾ ಶಂಕರ್, ಜಯರಾಂ, ಸಿದ್ದೇಗೌಡ, ಗೋವಿಂದೇಗೌಡ, ಜವರೇಗೌಡ, ವಿಜಯ್ಕುಮಾರ್, ರೂಪ ಹರಳಕುಪ್ಪೆ, ಮಂಜುನಾಥ್, ನಾಗರಾಜು, ಕನ್ನಲಿ ನವೀನ್, ಕೃಷ್ಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-40-1109283326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.