ಮಂಡ್ಯ: ಕಬ್ಬು ಸರಬರಾಜು ಮಾಡಿದ ರೈತರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ತಿಳಿಸಿದ್ದು, ಅದರಂತೆ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು ಸಹಾಯಕಿ ರೋಹಿಣಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

2025 ನವೆಂಬರ್ 8 ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಯ ಮಾಲೀಕರು ಹಾಗೂ ಕಬ್ಬು ಬೆಳೆಗಾರರು ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಎಫ್ಆರ್ಪಿ ದರದ ಮೇಲೆ ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳು ತಲಾ ₹50 ರಂತೆ ಸೇರಿಸಿ ಒಟ್ಟು ₹100 ಆರ್ಥಿಕ ನೆರವು ನೀಡುವುದಾಗಿ ನಿರ್ಧಾರ ಕೈಗೊಳ್ಳಲಾಗಿತ್ತು ಅದರಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ತನ್ನ ಪಾಲಿನ ಸುಮಾರು ₹300 ಕೋಟಿಗೂ ಹೆಚ್ಚಿನ ಹಣವನ್ನು ಈಗಾಗಲೇ ಬಿಡುಗಡೆ ಮಾಡಿರುವುದಾಗಿ ಸಕ್ಕರೆ ಸಚಿವರು ತಿಳಿಸಿದ್ದಾರೆ, ರಾಜ್ಯ ಸರ್ಕಾರದ ಪ್ರಸ್ತಾವನೆ ಆಧರಿಸಿ, ಕಬ್ಬು ಅಭಿವೃದ್ಧಿ ಆಯುಕ್ತರು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಜಿಲ್ಲಾಧಿಕಾರಿ ಅವರ ಕಚೇರಿಗೆ ಹಣ ಬಿಡುಗಡೆ ಮಾಡಿರುತ್ತದೆ. ಆದರೆ ನಮ್ಮ ಮಂಡ್ಯ ಜಿಲ್ಲಾ ವ್ಯಾಪ್ತಿಯ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಸರ್ಕಾರದ ಸಹಾಯಧನ ನೀಡಿಲ್ಲ ಎಂದು ಆರೋಪಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ.ಅಪ್ಪಾಜಿ, ಮುಖಂಡರಾದ ಜೆ.ಕೆ.ಬಸವರಾಜು, ಶ್ರೀಧರ್, ಪ್ರಕಾಶ್, ಜಯರಾಮು, ರುದ್ರಪ್ಪ, ಸ್ವಾಮಿ, ನಾಗರಾಜು, ಗವಿರಂಗ, ಅಚ್ಯುತಾ ತೂಬಿನಕೆರೆ, ಹರ್ಷಿತ್, ಶಿವಣ್ಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-40-2079304827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.