ಮಂಡ್ಯ: ‘ಪ್ರತಿ ಟನ್ ಕಬ್ಬಿಗೆ ₹150 ಪ್ರೋತ್ಸಾಹಧನ ನೀಡಬೇಕು, ಚಿರತೆ ಹಾವಳಿ ನಿಯಂತ್ರಿಸಬೇಕು, ಮೋಟಾರ್, ಅಡಿಕೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಇದರ ಬಗ್ಗೆ ಪೊಲೀಸರು ಕ್ರಮ ವಹಿಸಬೇಕು’ ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ರಸ್ತೆ ತಡೆ ನಡೆಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ನೆರೆದ ಕಾರ್ಯಕರ್ತರು ಹೆದ್ದಾರಿಯಲ್ಲಿ ರಸ್ತೆ ಸಂಚಾರಕ್ಕೆ ಕೆಲಕಾಲ ಅಡ್ಡಿಪಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಾಂಡವಪುರ ತಾಲ್ಲೂಕಿನ ಮಾಡ್ರಹಳ್ಳಿ ಗ್ರಾಮದಲ್ಲಿ ಎರಡು ಸಾವಿರ ಎಳನೀರನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಕ್ರಮ ಆಗಿಲ್ಲ ಎಂದು ಆರೋಪಿಸಿದರು.

ಇನ್ನೂ ಚಿಕ್ಕಮರಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ರೈತರು ಕೃಷಿ ಕೆಲಸಕ್ಕೆ ಹೋಗಲು ಭಯ ಪಡುತ್ತಿದ್ದಾರೆ. ಆದರೆ ಅರಣ್ಯ ಅಧಿಕಾರಿಗಳು ಹೇಳುವಂತೆ 200 ಚಿರತೆಗಳಿವೆ ಎನ್ನುತ್ತಾರೆ. ಬೋನುಗಳನ್ನು ಇಟ್ಟು ಚಿರತೆ ಸೆರೆ ಹಿಡಿಯುತ್ತಿಲ್ಲ. ಜೊತೆಗೆ ಸಿಬ್ಬಂದಿ ಇಲ್ಲ ಎನ್ನುವ ನೆಪ ಹೇಳುತ್ತಿದ್ದಾರೆ. ಆದರೆ ಸಿಬ್ಬಂದಿಯೇ ಇಲ್ಲದೇ ಹೋದ ಮೇಲೆ ಚಿರತೆ ನಿಯಂತ್ರಣ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್. ಕೆಂಪೂಗೌಡ ಮಾತನಾಡಿ, ‘ಅಡಿಕೆ ಕಳ್ಳತನ ಮತ್ತು ಪಂಪ್ಸೆಟ್ ಮೋಟಾರ್ ಕಳ್ಳತನವು ದಿನೇದಿನೇ ಹೆಚ್ಚುತ್ತಿದೆ. ಇದನ್ನು ನಿಯಂತ್ರಣ ಮಾಡುವಲ್ಲಿ ನಮ್ಮ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಆಯಾ ಪೊಲೀಸ್ ಠಾಣೆಗಳ ಗಮನಕ್ಕೆ ತರಲಾಗಿದೆ. ಕೆಲವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆದರೂ ಕಳ್ಳತನ ನಿಯಂತ್ರಣಕ್ಕೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಲಿಂಗಪ್ಪಾಜಿ, ವಿಜಯ್ಕುಮಾರ್, ಕನ್ನಲಿ ನವೀನ್, ಕೃಷ್ಣ, ಅರುಣ್ಕುಮಾರ್, ಮಂಜು ಕೋಣನಹಳ್ಳಿ, ತಡಗವಾಡಿ ನಿಂಗೇಗೌಡ, ಎಂ.ಬಿ.ಶ್ರೀಕಾಂತ್, ಪ್ರಿಯಾ ರಮೇಶ್, ಲತಾ ಶಂಕರ್, ಮಮತಾ, ರಾಣಿ ಹುಳ್ಳೇನಹಳ್ಳಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-40-184598146

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.