ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ: ಕನ್ನಡ ನಾಮಫಲಕ ಬಳಕೆಗೆ ಫೆ.28 ಗಡುವು

Published 19 ಜನವರಿ 2024, 16:23 IST
Last Updated 19 ಜನವರಿ 2024, 16:23 IST
ಅಕ್ಷರ ಗಾತ್ರ

ಮಂಡ್ಯ: ‘ಜಿಲ್ಲೆಯ ವ್ಯಾಪಾರಸ್ಥರು, ವಾಣಿಜ್ಯೋದ್ಯಮಿಗಳು, ಪೆಟ್ರೋಲ್ ಬಂಕ್, ಮೊಬೈಲ್ ಕಂಪನಿ ಫೆ.28ರೊಳಗೆ ಶೇ 60ರಷ್ಟು ಕನ್ನಡ ನಾಮಫಲಕ ಅಳವಡಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ’ ಎಂದು ಕದಂಬಸೈನ್ಯ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ್ ಎಚ್ಚರಿಕೆ ನೀಡಿದರು.

‘ರಾಜ್ಯದಲ್ಲಿ ಹೆಚ್ಚು ಕನ್ನಡ ಬಳಸುವ ಜಿಲ್ಲೆ ಮಂಡ್ಯ ಎನ್ನುವ ಹೆಗ್ಗಳಿಕೆ ಇದೆ. ಆದರೆ ಇತ್ತೀಚಿನ ವರ್ಷದಲ್ಲಿ ಇಂಗ್ಲಿಷ್‌ ನಾಮಫಲಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ಹೆಚ್ಚು ವ್ಯಾಪಾರ ಆಗಲಿದೆ ಎನ್ನುವ ಮನೋಭಾವ ಹೊಂದಿದ್ದಾರೆ. ಇದು ಜಿಲ್ಲೆಗೆ ಮಾಡಿದ ಅವಮಾನ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು.

‘ಫೆ.28ರೊಳಗೆ ಕನ್ನಡ ನಾಮಫಲಕ ಅಳವಡಿಸಬೇಕೆಂದು ರಾಜ್ಯಸರ್ಕಾರ ಗಡುವು ನೀಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಇದನ್ನು ಕಾಯ್ದೆ ಮಾಡಿ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಬೇಕು. ಕಲಬುರಗಿ ಜಿಲ್ಲೆಯಲ್ಲಿ ಉರ್ದು ಭಾಷೆಯ ನಾಮಫಲಕಗಳನ್ನು ಯಾವುದೇ ಕಾರಣಕ್ಕೂ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದನ್ನು ಖಂಡಿಸುತ್ತೇವೆ’ ಎಂದರು.

ರಾಜ್ಯ ಘಟಕದ ಸಂಚಾಲಕ ಎಸ್.ಶಿವಕಮಾರ್, ಸಹಕಾರ್ಯದರ್ಶಿಗಳಾದ ಉಮ್ಮಡಹಳ್ಳಿ ನಾಗೇಶ್, ಬಿ.ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ರಾಮು, ಥಾಮಸ್ ಬೆಂಜಮನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT