ಮಂಡ್ಯ: ಭ್ರೂಣಲಿಂಗ ಪತ್ತೆಗಾಗಿ 31 ಬಾಲಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವ ಆರೋಪದ ಮೇರೆಗೆ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್ನ ಡಾ.ದಿವ್ಯಾ ಚೇತನ, ನಾವಿ ಡಯಾಗ್ನಸ್ಟಿಕ್ ಸೆಂಟರ್ ಡಾ.ಹರ್ಷಿತ್ ಮತ್ತು ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್ನ ಡಾ.ಹರೀಶ್ ಬಂಧಿತರು. ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ತಲೆಮರೆಸಿ ಕೊಂಡಿದ್ದು, ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಪಟ್ಟಣ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಒಟ್ಟು 17 ಆರೋಪಿಗಳ ವಿರುದ್ಧ 12 ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ. ಸರ್ಕಾರಿ ವೈದ್ಯೆ, ಮೂವರು ಖಾಸಗಿ ವೈದ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆ ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲೂ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ: ಪಟ್ಟಣದ ಎರಡು ಡಯಾಗ್ನಸ್ಟಿಕ್ ಸೆಂಟರ್ಗಳಲ್ಲಿ ಭ್ರೂಣಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡಿರುವುದನ್ನು ಲೋಕಾಯುಕ್ತ ಪೊಲೀಸರು ಈಚೆಗೆ ಪತ್ತೆ ಮಾಡಿದ್ದರು.

ನಾವಿ ಡಯಾಗ್ನಾಸ್ಟಿಕ್ ಸೆಂಟರ್ನಲ್ಲಿ 2024ನೇ ಸಾಲಿನಲ್ಲಿ 19 ಮತ್ತು 2025ನೇ ಸಾಲಿನಲ್ಲಿ 5 ಸೇರಿದಂತೆ ಒಟ್ಟು 24 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಲಾಗಿದೆ. ಕುಶಾಲ್ ಡಯಾಗ್ನಾಸ್ಟಿಕ್ ಸೆಂಟರ್ನಲ್ಲೂ 7 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿರುವ ಆರೋಪವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.