ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಲ್ಟ್‌ ತಯಾರಿಕಾ ಘಟಕಕ್ಕೆ ಬೆಂಕಿ; ಅಪಾರ ಹಾನಿ

Published 3 ಮಾರ್ಚ್ 2024, 15:14 IST
Last Updated 3 ಮಾರ್ಚ್ 2024, 15:14 IST
ಅಕ್ಷರ ಗಾತ್ರ

ಮಂಡ್ಯ: ತಾಲ್ಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದ ಬೆಲ್ಟ್‌ ತಯಾರಿಕಾ ಘಟಕದಲ್ಲಿ ಶನಿವಾರ ತಡರಾತ್ರಿ ನಡೆದ ಅಗ್ನಿ ದುರಂತದಲ್ಲಿ ಯಂತ್ರೋಪಕರಣ, ಕಚ್ಚಾಸಾಮಗ್ರಿ ಸುಟ್ಟು ಹೋಗಿವೆ.

ಹರಿ ಬೆಲ್ಟ್‌ ಅಂಡ್ ಕನ್ವೇಯರ್ಸ್‌ ಪ್ರೈವೇಟ್ ಲಿಮಿಟೆಡ್‌ನಲ್ಲಿ ತಡರಾತ್ರಿ 2.30ರ ವೇಳೆಗೆ ಶಾರ್ಟ್‌ಸೆರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ನಂತರ ಕಾರ್ಖಾನೆಯಾದ್ಯಂತ ಬೆಂಕಿ ಆವರಿಸಿದ ಪರಿಣಾಮ ಒಂದು ಘಟಕ ಸಂಪೂರ್ಣವಾಗಿ ಸುಟ್ಟು ಹೋಗಿದೆ.

6 ಸಾಮಾನ್ಯ ಅಗ್ನಿಶಾಮಕ ವಾಹನಗಳು, 2 ಕೈಗಾರಿಕಾ ಅಗ್ನಿಶಾಮಕ ವಾಹನ ಹಾಗೂ 70 ಅಗ್ನಿಶಾಮಕ ಸಿಬ್ಬಂದಿ ನಿರಂತರ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಕಾರ್ಖಾನೆಯ 43 ಮಂದಿ ಕಾರ್ಮಿಕರು ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಕೆಲವೇ ಹೊತ್ತಿನಲ್ಲಿ ಬೆಂಕಿ ಆವರಿಸಿಕೊಂಡ ಕಾರಣ ಭದ್ರತಾ ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಅಗ್ನಿಶಾಮಕ ಇಲಾಖೆ ಪ್ರಾದೇಶಿಕ ಅಧಿಕಾರಿ ಗುರುರಾಜ್ ಅವರು ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮೈಸೂರಿನಿಂದ ಅಗ್ನಿಶಾಮಕ ವಾಹನ, ಕೈಗಾರಿಕಾ ಪಡೆಯ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಿ ಕಾರ್ಯಾಚರಣೆ ನಡೆಸಿದರು. ₹ 1 ಕೋಟಿಗೂ ಹೆಚ್ಚು ಮೌಲ್ಯದ ಸಾಮಗ್ರಿಗಳು ನಾಶವಾಗಿವೆ ಎಂದು ಕಾರ್ಖಾನೆ ಸಿಬ್ಬಂದಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT