ಮಂಡ್ಯ: ‘ಜಾನಪದ ಗ್ರಾಮೀಣ ಭಾಗದ ಜೀವನ ಜನರ ಪ್ರತಿಬಿಂಬವಾಗಿದ್ದು, ಅದನ್ನು ಉಳಿಸಿಕೊಂಡು ಹೋಗೋಣ’ ಎಂದು ಕಲಾವಿದ ಬಸವರಾಜು ಸಂಪಳ್ಳಿ ಸಲಹೆ ನೀಡಿದರು.

ತಾಲ್ಲೂಕಿನ ಎಚ್.ಕೋಡಿಹಳ್ಳಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಮಲೈಮಹದೇಶ್ವರ ಜಾನಪದ ಮತ್ತು ಸುಗಮ ಸಂಗೀತ ಅಕಾಡೆಮಿ ತಂಡದ ಸಹಯೋಗದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಜಾನಪದ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಹಳ್ಳಿಗಳಲ್ಲಿ ನಡೆಯುವ ಹಬ್ಬ, ಜಾತ್ರೆಗಳು, ಕೃಷಿ ಕೆಲಸಗಳಲ್ಲಿ ಹಾಗೂ ರಾಗಿ ಬೀಸುವಾಗ ಹಾಡುವ ಪದಗಳನ್ನು ಇಂದಿಗೂ ಮರೆಯಲು ಸಾಧ್ಯವಿಲ್ಲ, ಏಕೆಂದರೆ ಅವೆಲ್ಲವೂ ಜಾನಪದವಾಗಿವೆ. ಇನ್ನೂ ಪೂಜಾ ಕುಣಿತ, ಡೊಳ್ಳು ಕುಣಿತ, ಕೋಲಾಟದಲ್ಲಿ ಹಾಡುವ ಪದಗಳೂ ಜಾನಪದ ಗೀತೆಗಳಾಗಿವೆ’ ಎಂದರು.

ಪಶು ವೈದ್ಯಾಧಿಕಾರಿ ಸುರೇಶ್ ಮಾತನಾಡಿ, ‘ಜನರನ್ನು ಒಂದೆಡೆ ಸೇರಿಸುವ ಕಾರ್ಯಕ್ರಮವೇ ಜಾಣಪದ ಉತ್ಸವ ಎಂದರೆ ತಪ್ಪಲ್ಲ. ಜಾನಪದ ಕಲೆಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗೋಣ’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದ ಜವರೇಗೌಡ, ಬಸವೇಶ್ವರ ಗ್ರಾಮಾಭಿವೃದ್ಧಿ ಟ್ರಸ್ಟ್ನ ಗೌರವಾಧ್ಯಕ್ಷ ಕೆ.ಆರ್.ರಾಮಕೃಷ್ಣ, ಅಕಾಡೆಮಿ ಅಧ್ಯಕ್ಷೆ ದೇವೀರಮ್ಮ, ಕಾರ್ಯದರ್ಶಿ ಎಚ್.ಎಂ.ಶಿವಮಹದೇವು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-40-199219671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.