ನಾಗಮಂಗಲ: ತಾಲ್ಲೂಕಿನ ಬೆಳ್ಳೂರು ಹೋಬಳಿಯ ತಿರುಮಲಾಪುರ ಗ್ರಾಮದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗಿನ ಜಾವ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಕಡೆಯಿಂದ ಹಾಸನದ ಕಡೆಗೆ ಹೋಗುತ್ತಿದ್ದಾಗ ಬೆಳಗಿನ ಜಾವ 4.30 ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯ ಹೇಮಂತ್ ಕುಮಾರ್(22), ಶಿವಮೊಗ್ಗದ ಎನ್.ಎಂ.ಧೀರಜ್ (22), ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಚಂಡೂರಪುರ ಗ್ರಾಮದ ಪಿ.ಯೋಗೇಶ್ ಗೌಡ(23), ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂಪನಹಳ್ಳಿಯ ಕೆ.ಶರತ್ (22) ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಯುವಕರು ಗೆಳೆಯ ಶರತ್ ಜನ್ಮದಿನದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹಾಸನದ ಕಡೆಗೆ ಸಾಗುತ್ತಿದ್ದರು ಎಂಬ ಮಾಹಿತಿ ಲಭಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.