ಮಂಡ್ಯ: ‘ಜಿಲ್ಲೆಯಲ್ಲಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾಕಷ್ಟು ದಾಸ್ತಾನು ಲಭ್ಯವಿದ್ದು ಅನಧಿಕೃತವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಚ್ಪಿಸಿ, ಬಿಪಿಸಿ ಮತ್ತು ಐಒಸಿ ಇಂಧನ ವಿತರಕ ಮಾಲೀಕರೊಂದಿಗೆ ಸಭೆ ನಡೆಸಿ ಮಾತನಾಡಿದರು. ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು ಕಾನೂನುಬಾಹಿರ ಮತ್ತು ಅಪಾಯಕಾರಿ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಅಸುರಕ್ಷಿತ ಸಂಗ್ರಹವು ಭೀಕರ ಅಗ್ನಿ ಅವಘಡಗಳಿಗೆ ಕಾರಣವಾಗಬಹುದು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ 182 ಪೆಟ್ರೋಲ್ ಬಂಕ್ ಗಳಿದ್ದು ಜಿಲ್ಲೆಯಲ್ಲಿ ಪ್ರತಿ ನಿತ್ಯ 2.31 (ಲಕ್ಷ) ಲೀಟರ್ ಇಂಧನ ಬಳಸಲಾಗುತ್ತಿದೆ. ಜಿಲ್ಲೆಯಲ್ಲಿ 11.81 (ಲಕ್ಷ ) ಲೀಟರ್ ಪೆಟ್ರೋಲ್ ಸಂಗ್ರಹಣೆ ಇದೆ ಹಾಗೂ 18 (ಲಕ್ಷ ) ಲೀಟರ್ ಡೀಸೆಲ್ ಸಂಗ್ರಹಣೆ ಇದೆ. ಸಾರ್ವಜನಿಕರು ಆತಂಕಪಟ್ಟು ಅನಗತ್ಯವಾಗಿ ಕ್ಯಾನ್, ಬಾಟಲಿಗಳಲ್ಲಿ ತುಂಬಿಸಿ ಶೇಖರಣೆ ಮಾಡಬೇಡಿ ಎಂದು ತಿಳಿಸಿದರು. ಸಾರ್ವಜನಿಕರು ಪೆಟ್ರೋಲಿಯಂ ಉತ್ಪನ್ನಗಳನ್ನು ಅನವಶ್ಯಕವಾಗಿ ಸಂಗ್ರಹಿಸಿಡುವುದು ಕಾನೂನು ಬಾಹಿರ ಮತ್ತು ಅಸುರಕ್ಷಿತ. ಅಗ್ನಿ ಅವಘಡಗಳು ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಮತ್ತು ಅನಗತ್ಯವಾಗಿ ಕ್ಯಾನ್ ಮತ್ತು ಬಾಟಲಿಗಳಲ್ಲಿ ತುಂಬಿಸುವವರ ವಿರುದ್ಧ ಕಾನೂನು ಕ್ರಮವಹಿಸಿ ಎಂದು ಸೂಚಿಸಿದರು.

ಪೆಟ್ರೋಲ್ ಬಂಕ್ ಮಾಲೀಕರು ಕಾನೂನು ನಿಯಮ ಹಾಗೂ ಸುತ್ತೋಲೆಗಳನ್ನು ಅನುಸರಿಸಬೇಕು ಹಾಗೂ ಇಂಧನವನ್ನು ಕ್ಯಾನ್ ಅಥವಾ ಬಾಟಲಿಗಳಲ್ಲಿ ತುಂಬಿಸುವ ಪ್ರಕ್ರಿಯೆಯನ್ನು ನಿರ್ಬಂಧಿಸಬೇಕು ಎಂದು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ, ಆಹಾರ ಇಲಾಖೆ ಉಪನಿರ್ದೇಶಕ ಪ್ರತೀಕ್ ಹೆಗ್ಡೆ, ಪೆಟ್ರೋಲಿಯಂ ಉತ್ಪನ್ನಗಳ ಮಾಲೀಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-40-2105487772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.