ಮಂಡ್ಯ: 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಯಾಗದಿರುವುದರಿಂದ ಕುಡಿಯುವ ನೀರು ಮತ್ತು ಬೀದಿ ದೀಪಗಳ ನಿರ್ವಹಣೆಗೆ ಹಣವಿಲ್ಲದೆ ಆಡಳಿತ ನಡೆಸಲು ತೊಂದರೆಯಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಬಿ ಗ್ರೇಡ್) ಹುದ್ದೆ ಉನ್ನತೀಕರಣ ಸಂಘದ ಪದಾಧಿಕಾರಿಗಳು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು.

ತಾ.ಪಂ. ಕಚೇರಿಗೆ ಧಾವಿಸಿದ ಪದಾಧಿಕಾರಿಗಳು ಇಒ ಲೋಕೇಶ್ ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು. ಅಂಗಡಿಗಳ ಮಾಲೀಕರಿಂದ ₹5ರಿಂದ ₹20 ಲಕ್ಷದವರೆಗೆ ಸಾಮಗ್ರಿಗಳನ್ನು ಸಾಲದ ರೂಪದಲ್ಲಿ ಖರೀದಿ ಮಾಡಲಾಗಿದೆ. ಅನುದಾನ ಬಿಡುಗಡೆಯಾಗದಿರುವುದರಿಂದ ಅವರಿಗೆ ಬಾಕಿ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ಬಾಕಿ ಪಾವತಿ ಮಾಡದ ಕಾರಣ ಅಂಗಡಿ ಮಾಲೀಕರು ಮತ್ತೆ ಸಾಮಗ್ರಿಗಳ ಖರೀದಿಗೆ ಸಾಲ ನೀಡದಿರುವುದರಿಂದ ಗ್ರಾಮಗಳಲ್ಲಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಮೂಲಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ 15ನೇ ಹಣಕಾಸು ಯೋಜನೆಯಡಿ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವೇ ಸಾಮಗ್ರಿಗಳನ್ನು ಖರೀದಿಸಲು ಅನುಕೂಲವಾಗಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಜೊತೆಗೆ ಕೆ.ಟಿ.ಟಿ.ಪಿ ಕಾಯಿದೆಯಲ್ಲಿ ಸಾಮಗ್ರಿಗಳ ಖರೀದಿಗೆ ವಿಶೇಷ ಅನುಮತಿ ನೀಡುವುದು ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಸಂಘದ ಪದಾಧಿಕಾರಿಗಳಾದ ವಿನಯ್ಕುಮಾರ್, ಸುನಿಲ್ಕುಮಾರ್, ಕೃಷ್ಣೇಗೌಡ, ಪ್ರಸನ್ನ, ಅಶೋಕ್, ಶಿವಲಿಂಗಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-40-102415230

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.