ಮಂಡ್ಯ: ‘ಸಾರ್ವಜನಿಕ ದಾಖಲೆಗಳನ್ನು ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಸಾರ್ವಜನಿಕರಿಗೆ ಅವಶ್ಯವಾದ ದಾಖಲೆಗಳನ್ನು ಸರಿಯಾದ ಸಮಯದಲ್ಲಿ ನೀಡುವುದು ಅಧಿಕಾರಿಗಳ ಜವಾಬ್ದಾರಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಹೇಳಿದರು.

ಜಿಲ್ಲಾಧಿಕಾರಿ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪತ್ರಾಗಾರ ಮತ್ತು ಗ್ಯಾಸೆಟಿಯರ್ ಇಲಾಖೆಯ ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ದಾಖಲೆಗಳ ಅಧಿನಿಯಮ ಮತ್ತು ದಾಖಲೆಗಳ ನಿರ್ವಹಣೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ದಾಖಲೆಗಳು ಕೇವಲ ಕಾಗದಗಳಲ್ಲ, ಅವುಗಳು ಇತಿಹಾಸ ಮತ್ತು ಆಡಳಿತದ ಸಾಕ್ಷ್ಯಗಳಾಗಿದ್ದು, ದಾಖಲೆಗಳನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಜವಾಬ್ದಾರಿ. ಪ್ರಸ್ತುತ ದಿನಗಳಲ್ಲಿ ಎಲ್ಲ ದಾಖಲೆಗಳು ಡಿಜಿಟಲೀಕರಣಗೊಳ್ಳುತ್ತಿರುವುದರಿಂದ ಹಳೆಯ ದಾಖಲೆಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಈಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದರು.

ಕರ್ನಾಟಕ ರಾಜ್ಯ ಪತ್ರಗಾರ ಮತ್ತು ಗ್ಯಾಸೆಟಿಯರ್ ಇಲಾಖೆ ನಿರ್ದೇಶಕ ಗವಿಸಿದ್ದಯ್ಯ ಮಾತನಾಡಿ, ‘ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಾಗಾರದಲ್ಲಿ ಪಾಲ್ಗೊಂಡು ದಾಖಲೆಗಳ ಸಂರಕ್ಷಣೆಯಲ್ಲಿ ಎದುರಿಸುತ್ತಿರುವ ತಾಂತ್ರಿಕ ಸವಾಲುಗಳ ಕಾರ್ಯಾಗಾರದ ಉದ್ದೇಶ ಮತ್ತು ಇದರಿಂದ ಸರ್ಕಾರಿ ಕಚೇರಿಗಳಲ್ಲಿ ಆಗುವ ಸುಧಾರಣೆಗಳ ಬಗ್ಗೆ ಬೆಳಕು ಚೆಲ್ಲಿದರು. ಡಿಜಿಟಲೀಕರಣದ ಈ ಕಾಲದಲ್ಲಿ ಹಳೆಯ ದಾಖಲೆಗಳನ್ನು ಹೇಗೆ ಸಂರಕ್ಷಿಸಬೇಕು ಎಂದು ಮಾಹಿತಿ ನೀಡಿದರು.

ಮೈಸೂರು ವಿಭಾಗೀಯ ಪತ್ರಾಗಾರ ಕಛೇರಿ ಉಪನಿರ್ದೇಶಕ ಮಂಜುನಾಥ್ ಎಚ್.ಎಲ್, ಜಂಟಿ ನಿರ್ದೇಶಕ ನೆಲ್ಕುದ್ರಿ ಸದಾನಂದಪ್ಪ, ತಹಶೀಲ್ದಾರ್ಗಳಾದ ವಿಶ್ವನಾಥ್, ಚೇತನಾ ಯಾದವ್, ಲೋಕೇಶ್, ಅಶೋಕ್, ಪರಶುರಾಮ್ ಸತ್ತಿಗೇರಿ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಧನುಷ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-40-1485328755

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.