ಮಂಡ್ಯ: ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡುವಂತೆ ಅಭಿಯಾನ ಹಮ್ಮಿಕೊಂಡ ಫಲವಾಗಿ ಈವರೆಗೆ 129 ಗ್ರಾಮ ಪಂಚಾಯಿತಿಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ಸಜ್ಜುಗೊಳಿಸಲಾಗಿದೆ ಮಂಡ್ಯ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ.ಆರ್. ಅಭಿನಂದಿಸಿದರು.

ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಡಿಯೊ ಸಂವಾದದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕಿನ ಇಂಡುವಾಳು ಗ್ರಾ.ಪಂ.ನಲ್ಲಿ ನಡೆದ ಕಡತ ನಾಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಅಭಿಯಾನ ನಡೆಸಲಾಗಿತ್ತು. ದಾಖಲೆಗಳನ್ನು ಸೂಕ್ತವಾಗಿ ನಿರ್ವಹಿಸುವ ಗ್ರಾ.ಪಂ. ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಜ.10ರಂದು ನಡೆಯುವ ‘ಪಂಚಾಯತ್ ರಾಜ್ ಉತ್ಸವ’ದಂದು ಅಭಿನಂದಿಸಲಾಗುವುದು ಎಂದು ತಿಳಿಸಿದರು.

ಹೊಸದಾಗಿ ಜಾರಿಗೆ ತರಲಾಗಿರುವ ಇ-ಸ್ವತ್ತು ತಂತ್ರಾಂಶದಲ್ಲಿ ಕೋರಲಾಗುವ ದಾಖಲಾತಿಗಳನ್ನು ಪೂರ್ವಭಾವಿಯಾಗಿ ಸಂಗ್ರಹಿಸಲು ಹಾಗೂ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ನಿಗದಿತ ಸಮಯದೊಳಗೆ ಒದಗಿಸಲು ಅಭಿಲೇಖಾಲಯ ಅಗತ್ಯವಿದ್ದು, ಎಲ್ಲ ಗ್ರಾಮ ಪಂಚಾಯಿತಿಗಳು ಜ.31ರೊಳಗೆ ಅಭಿಲೇಖಾಲಯ ಸಜ್ಜುಗೊಳಿಸುವಂತೆ ಸೂಚಿಸಿದರು.

‘ವಿಕಸಿತ ಭಾರತ ಜಿ ರಾಮ್ ಜಿ’ (ನರೇಗಾ) 2026-27ನೇ ಸಾಲಿನ ಕ್ರಿಯಾಯೋಜನೆ ಜನವರಿ 15ರೊಳಗೆ ಸಿದ್ಧಪಡಿಸಿ ಸಲ್ಲಿಸಬೇಕಾಗಿದೆ. ಉಪಕಾರ್ಯದರ್ಶಿ (ಅಭಿವೃದ್ಧಿ) ಸೇರಿದಂತೆ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಕ್ರಿಯಾ ಯೋಜನೆಯನ್ನು ಪರಿಶೀಲಿಸಲು ಸೂಚಿಸಲಾಗಿದೆ ಎಂದರು.

15ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾಗಿ ಬಾಕಿ ಉಳಿದಿರುವ ಅನುದಾನವನ್ನು ನಿಮಾನುಸಾರ ವೆಚ್ಚ ಭರಿಸುವಂತೆ ಗ್ರಾ.ಪಂ. ಪಿಡಿಒಗಳು ಹಾಗೂ ತಾಲ್ಲೂಕು ಪಂಚಾಯಿತಿ ಇ.ಒ.ಗಳಿಗೆ ಸೂಚಿಸಲಾಗಿದೆ. ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ತಾಂತ್ರಿಕ ಸಮಸ್ಯೆಗಳಿದ್ದು, ಸದರಿ ಸಮಸ್ಯೆಗಳ ಬಗ್ಗೆ ಈಗಾಗಲೇ ರಾಜ್ಯ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಉಪಕಾರ್ಯದರ್ಶಿ (ಆಡಳಿತ) ಶಿವಲಿಂಗಯ್ಯ, ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ, ಸಹಾಯಕ ಕಾರ್ಯದರ್ಶಿ (ಆಡಳಿತ) ರವೀಂದ್ರ, ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಚಂದ್ರು, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಮತ್ತು ಪಿಡಿಒಗಳು ಹಾಜರಿದ್ದರು.

‘ತೆರಿಗೆ ವಸೂಲಾತಿ ಪ್ರಗತಿ ಹೆಚ್ಚಿಸಿ’

ತೆರಿಗೆ ವಸೂಲಾತಿಯ ಪ್ರಗತಿಯನ್ನು ಹೆಚ್ಚಿಸಲು ಎಲ್ಲಾ ತಾ.ಪಂ.ಗಳಿಗೆ ಗುರಿ ನಿಗದಿಗೊಳಿಸಲಾಗಿದ್ದು 10 ದಿನಗಳ ನಂತರ ಮತ್ತೊಮ್ಮೆ ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಆದ್ದರಿಂದ ಮುಂದಿನ 10 ದಿನದಲ್ಲಿ ನಿರೀಕ್ಷಿತ ಗುರಿಯನ್ನು ಸಾಧಿಸಲು ಕ್ರಮವಹಿಸಿ ಎಂದು ಸಿಇಒ ನಂದಿನಿ ಸೂಚಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನೀಡಲಾಗಿರುವ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಲು ಅಗತ್ಯ ಕ್ರಮವಹಿಸುವಂತೆ ಹಾಗೂ 2025-26ನೇ ಸಾಲಿನ ಗುರಿಗೆ ಅನುಗುಣವಾಗಿ ಶೇ 100ರಷ್ಟು ಪ್ರಗತಿ ಸಾಧಿಸುವಂತೆ ಸೂಚಿಸಲಾಗಿದೆ. ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.