ಮಂಡ್ಯ: ತಾಲ್ಲೂಕಿನ ಹಾಡ್ಯ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಒತ್ತಾಯಿಸಿ ಶವವಿಟ್ಟು 24 ಗಂಟೆ ಪ್ರತಿಭಟನೆ ನಡೆಸಲಾಯಿತು. ಅಧಿಕಾರಿಗಳ ಭರವಸೆ ಹಾಗೂ ಮನವೊಲಿಕೆ ಮೇರೆಗೆ ಪ್ರತಿಭಟನೆ ಕೈಬಿಟ್ಟು, ಶನಿವಾರ ಅಂತ್ಯಸಂಸ್ಕಾರ ನೆರವೇರಿತು.

ಗ್ರಾಮದ ಪೌರಕಾರ್ಮಿಕ ಕುಪ್ಪಯ್ಯ(70) ಎಂಬುವವರು ಶುಕ್ರವಾರ ಸಂಜೆ ಮೃತಪಟ್ಟಿದ್ದರು. ಆದರೆ ಅಂತ್ಯಸಂಸ್ಕಾರ ಮಾಡಲು ಜಾಗವಿಲ್ಲದ ಕಾರಣ ಹುಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶವ ಇಟ್ಟು ಪ್ರತಿಭಟನೆ ನಡೆಸಿದರು.

ಹಲವು ಬಾರಿ ಮನವಿ ಮಾಡಿದರೂ ಕ್ರಮವಹಿಸದ ಜನಪ್ರತಿನಿಧಿಗಳು, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ತಹಸೀಲ್ದಾರ್ ವಿಶ್ವನಾಥ್ ಭೇಟಿ ನೀಡಿ ಮನವೊಲಿಸಲು ಯತ್ನಿಸಿದರಾದರೂ ಸಫಲವಾಗಲಿಲ್ಲ.

ಸ್ಮಶಾನ ಜಾಗ ಗುರುತಿಸಿಕೊಡುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಹೇಳಿ ಶವವನ್ನು ಹಾಡ್ಯ ಗ್ರಾಮಕ್ಕೆ ವಾಪಸ್ ತೆಗೆದುಕೊಂಡು ಹೋಗಲಾಯಿತು. ಅಲ್ಲಿಯೂ ಮನೆ ಎದುರೇ ಶವ ಇಟ್ಟು ಪ್ರತಿಭಟನೆ ಮುಂದುವರಿಸಲಾಯಿತು.

‘ಸ್ಮಶಾನಕ್ಕೆ ಸ್ಥಳವಿಲ್ಲದ ಕಾರಣ ಖಾಸಗಿ ವ್ಯಕ್ತಿಯ ಜಾಗದಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಪೌರಕಾರ್ಮಿಕ ಕುಪ್ಪಯ್ಯ ಕುಟುಂಬ ಗುಡಿಸಲಿನಲ್ಲಿ ವಾಸುತ್ತಿದ್ದು, ಆಶ್ರಯ ಯೋಜನೆಯಡಿ ಮನೆ ನೀಡುವಂತೆ ಹಲವು ಬಾರಿ ಅರ್ಜಿ ಸಲ್ಲಿಸಿದ್ದರೂ ಮನೆ ನೀಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರಾದ ಬೆಟ್ಟಸ್ವಾಮಿ, ಶಿವಕುಮಾರ್, ಮಂಚೇಗೌಡ, ಪೌರಕಾರ್ಮಿಕರಾದ ರಾಜು, ಮುರುಗೇಶ, ವಿಜಯ್ಕುಮಾರ್, ಗಣೇಶ್, ಚೆಲುವ ಹಾಗೂ ಕುಪ್ಪಯ್ಯ ಕುಟುಂಬಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-40-829686927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.