ಹಲಗೂರು: ನಿಮ್ಮ ಸುತ್ತ ಮಾದಕ ವಸ್ತು ಸೇವನೆ, ಸಾಗಣೆ ಮತ್ತು ಮಾದಕ ವಸ್ತು ಕೃಷಿ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆಗೆ ಮಾಹಿತಿ ಕೊಡಿ ಎಂದು ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್. ಶ್ರೀಧರ್ ಮನವಿ ಮಾಡಿದರು.

ಬಾಳೆಹೊನ್ನಿಗ ಗ್ರಾಮದಲ್ಲಿ ಬುಧವಾರ ಬಸವೇಶ್ವರ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ 'ಮಾದಕ ದ್ರವ್ಯ ಮುಕ್ತ ಕರ್ನಾಟಕ' ಮತ್ರು 'ಕೌಟುಂಬಿಕ ದೌರ್ಜನ್ಯ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯವನ್ನು ಮಾದಕ ದ್ರವ್ಯ ಮುಕ್ತವನ್ನಾಗಿಸಲು ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಕೆಎಸ್ಪಿ ಆ್ಯಪ್ ಇದ್ದು, ಪ್ಲೇ ಸ್ಟೋರ್ ಮೂಲಕ ಅ್ಯಪ್ ಡೌನ್ಲೋಡ್ ಮಾಡಿ ಅನ್ಲೈನ್ ಮೂಲಕ ಇಲಾಖೆಗೆ ಮಾಹಿತಿ ನೀಡಬಹುದು. ದೂರುದಾರರ ಬಗ್ಗೆ ಮಾಹಿತಿ ಗೋಪ್ಯವಾಗಿ ಇರಿಸಲಾಗುತ್ತದೆ ಎಂದು ತಿಳಿಸಿದರು.

ಪಿಎಸ್ಐ ಲೋಕೇಶ್ ಮಾತನಾಡಿ, ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ತಡೆಗಟ್ಟಲು ಕಾನೂನಿನಲ್ಲಿ ಅವಕಾಶ ಕಲ್ಪಿಸಿದೆ. ವರದಕ್ಷಿಣೆ ಪ್ರಕರಣದ ದೂರಿನಲ್ಲೂ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಪ್ರೊಬೇಷನರಿ ಪಿಎಸ್ಐಗಳಾದ ಜಯಂತ್, ಸುನೀಲ್, ಗ್ರಾಮದ ಮುಖಂಡರಾದ ಬಿ.ವಿ.ಪ್ರಕಾಶ್, ನಾಗರಾಜು, ಸಿಬ್ಬಂದಿ ರಫೀಕ್ ನದಾಫ್, ಮೋಹನ್, ಶಿವರಾಜು, ಕಾಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-40-243474239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.