ಹಲಗೂರು (ಮಂಡ್ಯ ಜಿಲ್ಲೆ): ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಯುಧ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ ನಾಲ್ವರನ್ನು ಹಲಗೂರು ಪೊಲೀಸರು ಬಂಧಿಸಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರು ಗ್ರಾಮದ ಮುತ್ತುಸ್ವಾಮಿ, ರಾಜು, ಚಂದ್ರು ಮತ್ತು ಹಲಗೂರು ಹೋಬಳಿ ಮಾಸ್ಟರ್ ದೊಡ್ಡಿಯ ಮಹೇಶ್ ಬಂಧಿತರು.

ಬೆಂಗಳೂರಿನ ಜೆ.ಪಿ. ನಗರ ನಿವಾಸಿ ಯಶೋಧಮ್ಮ ಮಾಲೀಕತ್ವದ ತೋಟದ ಮನೆಯಲ್ಲಿ ಜಮೀನು ಕೆಲಸ ಮಾಡಿಕೊಂಡಿದ್ದ ಚಂದ್ರು ಮತ್ತು ಕವಿತಾ ಅವರ ಮೇಲೆ ಮಾರ್ಚ್ 15ರಂದು ರಾತ್ರಿ 9ರ ವೇಳೆ ಏಕಾಏಕಿ ದಾಳಿ ಮಾಡಿ ಚಿನ್ನದ ಅಭರಣ ಕಿತ್ತುಕೊಂಡು ಪರಾರಿಯಾಗಿದ್ದರು.

ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್. ಶ್ರೀಧರ್ ಮತ್ತು ಪಿಎಸ್ಐ ಲೋಕೇಶ್ ಅವರ ತಂಡವು ತ್ವರಿತಗತಿಯಲ್ಲಿ ದುಷ್ಕರ್ಮಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. ‘ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಸಿಪಿಐ ಶ್ರೀಧರ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-37-1251546754

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.