ಮಂಡ್ಯ: ‘ಕಳೆದ ಮೂರು ವರ್ಷಗಳಿಂದ ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದ್ದು, ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಿಮ್ಸ್ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಿರುವ ‘ಮಿಡ್ ವೈಫರಿ ಆಧಾರಿತ ಆರೈಕೆ ಘಟಕ’ (ಸಹಜ ಹೆರಿಗೆ) ಮತ್ತು ‘ತಾಯಿ ಹಾಲಿನ ಸಂಗ್ರಹಣಾ ಕೇಂದ್ರ’ (ಶಿಶು ಸಂಜೀವಿನಿ) ಘಟಕಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಯಿ ಮಗುವಿನ ಆರೋಗ್ಯ ಕಾಪಾಡುವುದು ಮುಖ್ಯವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಶಿಶು ಸಂಜೀವಿನಿ ಯೋಜನೆ ಮಹತ್ವದ್ದಾಗಿದೆ. ಮಕ್ಕಳ ಆರೋಗ್ಯ ಕಾಪಾಡುವುದು ಮತ್ತು ಮಕ್ಕಳ ಮರಣ ಸಂಖ್ಯೆಯನ್ನು ತಪ್ಪಿಸುವ ಸದುದ್ದೇಶದಿಂದ ಶಿಶು ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಉಪಯೋಗವನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

‘ಶಿಶು ಸಂಜೀವಿನಿ’ ಯೋಜನೆಯಿಂದ ಅವಧಿ ಪೂರ್ವ ಜನಿಸುವ ಮಕ್ಕಳಿಗೆ ಮತ್ತು ಪೌಷ್ಟಿಕಾಂಶ ಕೊರತೆಯಿರುವ ಮಕ್ಕಳಿಗೆ ಉಪಯುಕ್ತವಾಗುತ್ತದೆ. ತಾಯಿಂದಿರು ಎದೆ ಹಾಲು ನೀಡದಿದ್ದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಹೆಚ್ಚುವರಿ ಹಾಲನ್ನು ಅನ್ಯ ಮಕ್ಕಳಿಗೆ ನೀಡಿ ಶಿಶುಗಳ ಜೀವ ಉಳಿಸಿದ ಸಾರ್ಥಕತೆ ಸಿಗುತ್ತದೆ’ ಎಂದು ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಆರೋಗ್ಯ ಇಲಾಖೆ ಮುತುವರ್ಜಿ ವಹಿಸಿ ಜಿಲ್ಲೆಯಲ್ಲಿ ‘ತಾಯಿ ಎದೆ ಹಾಲಿನ ಸಂಗ್ರಹ ಘಟಕವನ್ನು ಪ್ರಾರಂಭಿಸಲಾಗಿದೆ. ಇದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಶಾಸಕ ಪಿ. ರವಿಕುಮಾರ್, ಜಿಲ್ಲಾಧಿಕಾರಿ ಕುಮಾರ, ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ, ಮುಡಾ ಅಧ್ಯಕ್ಷ ಪ್ರಕಾಶ್, ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ್, ಡಾ.ಮನೋಹರ್, ಡಾ.ಕೀರ್ತಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-40-1030542797

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.