ಮಂಡ್ಯ: ಮಹಿಳಾ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಕಾವೇರಿ ಗೆಳತಿಯರ ಬಳಗ ಹಾಗೂ ಇಂದಿರಾ ಯುವತಿ ಬಳಗದ ಸಹಯೋಗಲ್ಲಿ ಮಂಗಳವಾರ ಕ್ರೀಡಾಕೂಟ ನಡೆಯಿತು.

ಕ್ರೀಡಾ ಸ್ಪರ್ಧೆಗೆ ಚಾಲನೆ ನೀಡಿದ ರೈತ ಮಹಿಳೆ ಲತಾ ಶಂಕರ್, ‘ಗ್ರಾಮೀಣ ಭಾಗದ ಮಹಿಳೆಯರು ಕೃಷಿ ಕಾಯಕದಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಅವರಿಗೂ ಸ್ವಲ್ಪ ಮನರಂಜನೆ ಸಿಗಬೇಕೆನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಷಯ’ ಎಂದರು.

ಮುಖ್ಯ ಶಿಕ್ಷಕಿ ಭಾಗ್ಯಮ್ಮ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಕ್ರೀಡಾಕೂಟ ಆಯೋಜಿಸಿರುವುದು ಉತ್ತಮ ಕೆಲಸವಾಗಿದೆ. ಇಂತಹ ಹಲವು ಕಾರ್ಯಕ್ರಮಗಳನ್ನು ಮಹಿಳೆಯರಿಗಾಗಿ ಆಯೋಜಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಹೆಚ್ಚಾಗಿ ನಡೆಯಬೇಕು’ ಎಂದು ಸಲಹೆ ನೀಡಿದರು.

ಕಾವೇರಿ ಗೆಳತಿಯರ ಬಳಗದ ಅಧ್ಯಕ್ಷೆ ನಿಂಗರಾಜಮ್ಮ, ಹೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯಾ ಚೇತನ್, ಕಾರ್ಯದರ್ಶಿ ಸದಾಶಿವಮೂರ್ತಿ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಸಾವಿತ್ರಮ್ಮ, ಮಾಜಿ ಅಧ್ಯಕ್ಷರಾದ ಪದ್ಮ, ನಿರುಪಮಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-40-414338183

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.