ಮದ್ದೂರು: ಅಧಿಕ ಮಾಸದ ಹಿನ್ನೆಲೆಯಲ್ಲಿ ನಗರದ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಲೋಕ ಕಲ್ಯಾಣಕ್ಕಾಗಿ, ನಾಡಿಗೆ ಉತ್ತಮ ಮಳೆ ಬರಲಿ ಎಂದು ಪ್ರಾರ್ಥಿಸಿ 1008 ಲೀಟರ್ ಮಧು ಅಭಿಷೇಕ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ಅವರ ನೇತೃತ್ವದಲ್ಲಿ ಭಾನುವಾರ ಬೆಳ್ಳಿಗೆ ಸುಮಾರು 6 ರಿಂದ 7 ಸಹ ಅರ್ಚಕರು ದೇವರ ಮಂತ್ರಗಳನ್ನು ಪಠಿಸುತ್ತ ಶಾಸ್ತ್ರೊಕ್ತವಾಗಿ ಪ್ರಾಣ ದೇವರಿಗೆ ಮಧು ಅಭಿಷೇಕ ಮಾಡಿದರು.

ಸಹಸ್ರಾರು ಸಂಖ್ಯೆಯ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಮಧು ಅಭಿಷೇಕ ನೋಡಿ ಕಣ್ತುಂಬಿಕೊಂಡು, ದೇವರ ಕೃಪೆಗೆ ಒಳಗಾದರು. ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.

ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಪ್ರಶಂಸೆ:

ಬೆಂಗಳೂರಿನ ಉದ್ಯಮಿ ಶ್ರುತಿ ಶ್ರೀನಿಧಿ ದಂಪತಿ ಲೋಕ ಕಲ್ಯಾಣಾರ್ಥಕ್ಕಾಗಿ, ಅಧಿಕ ಮಾಸದ ಪರ್ವ ಕಾಲದಲ್ಲಿ ಮದ್ದೂರಿನ ಪ್ರಸಿದ್ಧ ಶ್ರೀ ಹೊಳೆ ಆಂಜನೇಸ್ವಾಮಿ ದೇಗುಲದಲ್ಲಿ 1008 ಲೀಟರ್ ಮಧು ಅಭಿಷೇಕ ಮಾಡಿಸಿರುವ ಬಗ್ಗೆ ಉಡುಪಿ ಶ್ರೀ ವಿಶ್ವಪ್ರಸನ್ನ ತಿರ್ಥ ಪ್ರಸನ್ನ ಸ್ವಾಮೀಜಿ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-40-1326664975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.