ಮದ್ದೂರು: ಫ್ಲಾರೆನ್ಸ್ ನೈಟಿಂಗೇಲ್ ಜನ್ಮ ದಿನವನ್ನೇ ವಿಶ್ವದಾದಿಯರ ದಿನವಾಗಿ ಆಚರಿಸಲಾಗುತ್ತಿದೆ ಎಂದು ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಆಫ್ ಇಂಟರ್ನ್ಯಾಷನಲ್ ನ ಸೌತ್ ಮಲ್ಟಿಪಲ್ ಕೌನ್ಸಿಲ್ ಅಧ್ಯಕ್ಷ ಕೆ.ಟಿ. ಹನುಮಂತು ತಿಳಿಸಿದರು.

ತಾಲ್ಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಆಫ್ ಇಂಟರ್ನ್ಯಾಷನಲ್ ವತಿಯಿಂದ ಅಂತರರಾಷ್ಟ್ರೀಯ ದಾದಿಯರ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ದಾದಿಯರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀಮಂತ ಕುಟುಂಬದಿಂದ ಬಂದ ಫ್ಲಾರೆನ್ಸ್ ನೈಟಿಂಗೇಲ್ ಅವರು ದಾದಿಯಾಗಿ, ಯುದ್ಧಪೀಡಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದವರು. ವಿದ್ಯುತ್ ಇಲ್ಲದಿದ್ದ ಕಾಲದಲ್ಲಿಯೇ ದೀಪವನ್ನು ಹಿಡಿದುಕೊಂಡು ಯುದ್ಧದಲ್ಲಿ ಗಾಯಗೊಂಡ ಸೈನಿಕರ ಆರೈಕೆ ಮಾಡುತ್ತಿದ್ದ ಅವರನ್ನು ‘ಎ ಲೇಡಿ ವಿಥ್ ಲ್ಯಾಂಪ್’ ಎಂದು ಕರೆಯುತ್ತಿದ್ದರು ಎಂದರು.

ನಮ್ಮ ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ದಾದಿಯರು ಇದ್ದಾರೆ. ಅವರು ಹಗಲು ಇರುಳು ಎನ್ನದೆ ಎಂತಹುದೇ ಆರೋಗ್ಯ ಸಮಸ್ಯೆಗಳಿದ್ದರೂ ಸಹೋದರಿಯರಂತೆ ರೋಗಿಗಳ ಶುಶ್ರೂಷೆ ಮಾಡುವ ಇವರ ಸೇವೆಗೆ ಬೆಲೆ ಕಟ್ಟಲಾಗದು. ಸರ್ಕಾರಗಳು ಇವರ ಸೇವೆಯನ್ನು ಪರಿಗಣಿಸಿ ಉತ್ತಮ ವೇತನ ಸೇರಿ ಇತರೆ ಯೋಜನೆಗಳನ್ನು ರೂಪಿಸಬೇಕು ಎಂದು ಆಗ್ರಹಿಸಿದರು.

ಆಸ್ಪತ್ರೆಯ ದಾದಿಯರನ್ನು ಸನ್ಮಾನಿಸಲಾಯಿತು. ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಆಯೇಷಾ ರಬ್ಬಾನಿ ಮಾತನಾಡಿದರು. ವೈದ್ಯಾಧಿಕಾರಿ ಡಾ.ನಿಸರ್ಗ, ಅಲಯನ್ಸ್ನ ಜಿಲ್ಲಾ ಗವರ್ನರ್ ಶಶಿಧರ್ ಈಚಗೆರೆ, ಅಲಯನ್ಸ್ನ 2ನೇ ಉಪ ಗವರ್ನರ್ ಹಿರಿಯ ವಕೀಲ ಶಿವಣ್ಣ, ಕೃಷ್ಣಪ್ಪ, ಹಿರಿಯ ಆರೋಗ್ಯ ನಿರೀಕ್ಷಕರಾದ ಶಂಕರೇಗೌಡ, ಧನಂಜಯ ಸೇರಿ ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-40-1607861604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.