ಮಂಡ್ಯ: ಜಿಲ್ಲೆಯಲ್ಲಿ ಮದ್ಯ ಮಾರಾಟ ಅಂಗಡಿಗಳು ಹೆಚ್ಚುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಮೇಲೆ ಅಧಿಕಾರಿಗಳು ಕಾನೂನು ಕ್ರಮವಹಿಸಬೇಕು ಎಂದು ಶಾಸಕ ಪಿ. ರವಿಕುಮಾರ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಂಡ್ಯ ತಾಲ್ಲೂಕು ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆ.ಡಿ.ಪಿ) ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಇನ್ನು ಮುಂದೆ ಮದ್ಯದಂಗಡಿಗೆ ಹೊಸ ಪರವಾನಗಿ ನೀಡಬಾರದು. ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿಗಳು ಬಂದು ಹೊಸ ಪರವಾನಗಿ ಪಡೆದು ಮದ್ಯದಂಗಡಿ ಮಾಡಿ ಜನರಿಗೆ ಕುಡಿಸಿ ಹಾಳು ಮಾಡುತ್ತಾರೆ. ಈ ಸಂಬಂಧ ಅಬಕಾರಿ ಡಿಸಿಗೂ ಪತ್ರ ಬರೆಯುತ್ತೇನೆ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಔಷಧಗಳ ಕೊರತೆ ಆಗದಂತೆ ಔಷಧಿಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಕ್ರಮ ವಹಿಸಬೇಕು. ರಾತ್ರಿ ವೇಳೆಯಲ್ಲಿ ಬಸರಾಳು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರನ್ನು ನೇಮಿಸಿ ಎಂದು ಸೂಚಿಸಿದರು.

ಕೃಷಿ ಇಲಾಖೆಯು ಜಿಲ್ಲೆಯ ರೈತರಿಗೆ ರಸಗೊಬ್ಬರದ ಕೊರತೆ ಉಂಟಾಗದಂತೆ ಅಗತ್ಯ ಕ್ರಮವಹಿಸಬೇಕು ಹಾಗೂ ಬಿತ್ತನೆ ಬೀಜ ವ್ಯವಸ್ಥೆಯನ್ನು ಕಲ್ಪಿಸಬೇಕು. ಕೃಷಿ ಇಲಾಖೆಯಿಂದ ರೈತರಿಗೆ ಸಿಗುವ ಯೋಜನೆಗಳ ಮಾಹಿತಿಯನ್ನು ರೈತರಿಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿ ಪ್ರಚಾರ ಮಾಡಬೇಕು ಎಂದರು.

ಬೇಸಿಗೆ ಅವಧಿಯಲ್ಲಿ ಅನಗತ್ಯವಾಗಿ ವಿದ್ಯುತ್ ಕಡಿತಗೊಳಿಸಿ ಜನರಿಗೆ ಸಮಸ್ಯೆಯಾಗುವಂತೆ ಮಾಡಬೇಡಿ ಎಂದು ಸೆಸ್ಕ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಾನುವಾರು ಮರಣ ಹೊಂದಿದ ನಂತರ ದಾಖಲಾತಿ ಪರಿಶೀಲಿಸಿ ಪರಿಹಾರವನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ನೀಡಬೇಕು. ಈ ಸೌಲಭ್ಯದ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ ಎಂದು ಸೂಚಿಸಿದರು.

ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಗರ್ಭಿಣಿಯರು, ಬಾಣಂತಿಯರಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ ಒದಗಿಸಬೇಕು. ಬಾಣಂತಿಯರಿಗೆ ಮನೆ– ಮನೆಗೆ ಆಹಾರ ಪದಾರ್ಥಗಳು ತಲುಪುವಂತೆ ಕ್ರಮವಹಿಸಬೇಕು ಎಂದರು.

ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ಗಳ ಸಂಚಾರಕ್ಕೆ ಕ್ರಮ ವಹಿಸುವಂತೆ ಕೆಎಸ್ಆರ್ಟಿಸಿ ಅಧಿಕಾರಿಗೆ ಶಾಸಕರು ಸೂಚಿಸಿದರು.

ಸಭೆಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ. ಪ್ರಕಾಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ಶಿವಲಿಂಗಯ್ಯ, ಡಿವೈಎಸ್ಪಿ ಲಕ್ಷ್ಮೀನಾರಾಯಣ್ ಪ್ರಸಾದ್, ತಹಸೀಲ್ದಾರ್ ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಸದಸ್ಯ ಎಚ್.ಕೆ.ರುದ್ರಪ್ಪ ಹಾಗೂ ತಾಲ್ಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-40-938687875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.