ಮಂಡ್ಯ: ‘ಕಾಂಗ್ರೆಸ್ ಸಚಿವರು ಮತ್ತು ಶಾಸಕರು ನನ್ನ ಮನೆಗೆ ಬಂದಿರುವುದನ್ನೇ ತಪ್ಪಾಗಿ ಅರ್ಥೈಸಿಕೊಂಡು ಮಾತನಾಡುವುದು ಬೇಡ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷ ಬಿಡದಿ ಬಸವರಾಜು ಮನವಿ ಮಾಡಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಮಂಡ್ಯ ಶಾಸಕ ಪಿ.ರವಿಕುಮಾರ್ ಅವರು ನನ್ನ ಅಕ್ಕನ ಮದುವೆಗೆ ಬಂದಿರಲಿಲ್ಲ, ಹಾಗಾಗಿ ಮನೆಗೆ ಸೌಹಾರ್ದಯುತ ಭೇಟಿ ನೀಡಿ ವಧು–ವರನ್ನು ಆಶೀರ್ವದಿಸಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

‘ನಾಗಮಂಗಲದ ಮನೆಗೆ ಬಂದ ಅತಿಥಿಗಳಿಗೆ ಔತಣ ಕೂಟ ಏರ್ಪಡಿಸಲಾಗಿತ್ತು ಅಷ್ಟೇ, ನಾನು ಜೆಡಿಎಸ್ನಲ್ಲಿಯೇ ಇರುತ್ತೇನೆ. ಪಕ್ಷಾಂತರದ ಗಾಳಿ ಸುದ್ದಿ ಹರಡಬೇಡಿ, ಇದರಲ್ಲಿ ಯಾವುದೇ ಹುರುಳಿಲ್ಲ ಬದಲಿಗೆ ರಾಜಕೀಯ ಮಾತುಗಳು ನಡೆಸಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಭಾನುಪ್ರಕಾಶ್, ಲೋಕೇಶ್, ತಾಂಡವ, ಪ್ರಕಾಶ್, ಸಂತೋಷ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-40-1127924538

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.