ಮಳವಳ್ಳಿ (ಮಂಡ್ಯ ಜಿಲ್ಲೆ): ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ಮಾಡಲು ಬಂದಿದ್ದ ದರೋಡೆಕೋರರ ತಂಡ ಚಿನ್ನಾಭರಣ ದೋಚುವ ವೇಳೆ ಘಟನೆಯನ್ನು ನೋಡಿದ ವ್ಯಕ್ತಿಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಭಾನುವಾರ ನಸುಕಿನ ವೇಳೆ ನಡೆದಿದೆ.

ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ(72) ಮೃತಪಟ್ಟವರು.

ಗ್ರಾಮದ ಮುಖ್ಯರಸ್ತೆಯ ಮಹಾಲಕ್ಷ್ಮಿ ಜ್ಯುವೆಲರ್ಸ್ ಅಂಡ್ ಬ್ಯಾಂಕರ್ಸ್ ನಲ್ಲಿ ಶನಿವಾರ ರಾತ್ರಿ 2 ಗಂಟೆ ಸಮಯದಲ್ಲಿ ದರೋಡೆಕೋರ ತಂಡ ಅಂಗಡಿ ಬಾಗಿಲನ್ನು ಗ್ಯಾಸ್ ಕಟ್ಟರ್ ನಿಂದ ಕಟ್ ಮಾಡಿ ಒಳ ನುಗ್ಗಿ ಚಿನ್ನಾಭರಣಗಳನ್ನು ದೋಚುತ್ತಿದ್ದರು.

ಈ ವೇಳೆ ಪಕ್ಕದಲ್ಲಿದ್ದ ಮಹದೇಶ್ವರ ಹೋಟೇಲ್ ಮಾಲೀಕ ಮಾದಪ್ಪ ಅವರು ಶಬ್ದ ಕೇಳಿ ಹೊರಬಂದಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದರೋಡೆಕೋರರು ಜ್ಯುವೆಲರಿ ಶಾಪ್ ನ ಸಿಸಿಟಿವಿಯ ಡಿವಿಆರ್ ಅನ್ನು ಹೊತ್ತು ಪರಾರಿಯಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ವಿ.ಕೃಷ್ಣಪ್ಪ, ಸಿಪಿಐ ಬಿ.ಎಸ್.ಶ್ರೀಧರ್, ಪಿಎಸ್ಐ ಡಿ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾ.ಪಂ.ಎಡವಟ್ಟು ದರೋಡೆ ನಡೆದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿಯೇ ಒಂದು ತಿಂಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು.

ಕಿರುಗಾವಲು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇತ್ತೀಚೆಗೆ ಸಿಸಿಟಿವಿಗಳಿಗೆ ರೀಚಾರ್ಜ್ ಮಾಡಿಸಿಲ್ಲ ಎಂಬ ಆರೋಪ ಗ್ರಾಮ ಪಂಚಾಯತಿ ವಿರುದ್ಧದ ಕೇಳಿ ಬರುತ್ತಿದ್ದು, ಇದೆಲ್ಲವನ್ನೂ ಗಮನಿಸಿ ದರೋಡೆಕೋರ ತಂಡ ಕೃತ್ಯ ಎಸಗಿದ್ದಾರೆ ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿ ವಿರುದ್ಧ ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.