ಮಂಡ್ಯ: ‘ಹಳ್ಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ವಿದ್ಯಾಭ್ಯಾಸ ಪಡೆದಂತೆ ಜೀತ ಪದ್ಧತಿ ಕ್ರಮೇಣ ಕಡಿಮೆಯಾಗುತ್ತಿದೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ ಹೇಳಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಜೀತ ಪದ್ಧತಿ ರದ್ದತಿ ಕಾಯ್ದೆ 1976ರ ಕುರಿತು ಬುಧವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಎಲ್ಲಿ ಬರಗಾಲ, ಪ್ರವಾಹ ಉಂಟಾಗುತ್ತದೋ ಅಲ್ಲಿ ಆಹಾರದ ಸಮಸ್ಯೆಯಿಂದ ಹಾಗೂ ಖಾಸಗಿ ಲೇವಾದೇವಿ ವ್ಯವಹಾರ ಮಾಡುವ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೀತ ಪದ್ಧತಿ ಜಾರಿಯಲ್ಲಿದೆ. ಇವತ್ತಿಗೂ ಜೀತ ಪದ್ಧತಿ ಜೀವಂತವಾಗಿ ಇರುವುದು ನಮ್ಮ ಗಮನಕ್ಕೆ ಬಂದಿದೆ. ಜೀತ ಪದ್ಧತಿ ಆಚರಿಸುವವರು, ಜೀತ ಪದ್ಧತಿಗೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪ್ರಚೋದನೆ ನೀಡುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಮೂಲಕ ಜಾಗೃತಿ ಜೀತ ಪದ್ಧತಿ ನಿರ್ಮೂಲನೆಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ಜೀತ ಪದ್ಧತಿ ನಿರ್ಮೂಲನೆ ಸಾಮಾಜಿಕ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪಣ ತೊಡಬೇಕು. ವ್ಯಕ್ತಿಯ ಇಚ್ಛೆಗೆ ವಿರುದ್ಧವಾಗಿ ಶೋಷಣೆಯಿಂದ ಕಾರ್ಯ ಮಾಡಿಸಿಕೊಳ್ಳುವುದು ಕಾನೂನು ಬಾಹಿರ ಹಾಗೂ ಅಮಾನವೀಯ ಕೃತ್ಯವಾಗಿದೆ. ಜೀತ ಪದ್ಧತಿಗೆ ಪ್ರಮುಖ ಕಾರಣವೆಂದರೆ ನಮ್ಮಲ್ಲಿರುವ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ’ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ್ ಎಂ, ಸಮಾಲೋಚನಾ ಮನಃಶಾಸ್ತ್ರ ತಜ್ಞರಾದ ಪ್ರಥಮ್ ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.

‘84 ಜೀತ ವಿಮುಕ್ತರಿಗೆ ಸೌಲಭ್ಯ’

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಮಾತನಾಡಿ ‘ನನ್ನ ಗುರುತು' ಎಂಬುದು ಜೀತ ಪದ್ಧತಿಯಿಂದ ಮುಕ್ತರಾದವರು ಮತ್ತು ಸೂಕ್ತ ದಾಖಲೆಗಳಿಲ್ಲದ ಬಡವರಿಗೆ 13 ಅಗತ್ಯ ಸರ್ಕಾರಿ ದಾಖಲೆಗಳನ್ನು (ಆಧಾರ್ ರೇಷನ್ ಕಾರ್ಡ್ ಜಾತಿ ಪ್ರಮಾಣಪತ್ರ ಇತ್ಯಾದಿ) ಒದಗಿಸುವ ವಿಶೇಷ ಅಭಿಯಾನವಾಗಿದೆ. ಜಿಲ್ಲೆಯಲ್ಲಿ ಜೀತ ಪದ್ಧತಿಗೆ ಒಳಗಾದ 84 ಮಂದಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ‘ನನ್ನ ಗುರುತು’ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು. ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಇಲಾಖೆಯಿಂದ ಜೀತ ವಿಮುಕ್ತಿ ಹೊಂದಿದ ವ್ಯಕ್ತಿಗೆ ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ವಾಹನ ನೀಡಿ ಅವರ ಬದುಕಿಗೆ ನೆರವಾಗಿದೆ. ಅಧಿಕಾರಿಗಳು ಜೀತ ವಿಮುಕ್ತರಿಗೆ ಮಾನವ ನೆಲೆಯಿಂದ ಸ್ಪಂದಿಸಬೇಕು. ಜೀತ ಪದ್ಧತಿಯಿಂದ ವಿಮುಕ್ತಿಗೊಳಿಸುವುದರ ಜೊತೆಗೆ ಜೀತ ಪದ್ಧತಿ ಮನಸ್ಥಿತಿಯನ್ನು ಹೋಗಲಾಡಿಸಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.