ಮಂಡ್ಯ: ಕಾವೇರಿ ನೀರಿಗಾಗಿ ಆಗ್ರಹಿಸಿ ನಗರದ ಕೆ.ಎಚ್.ಬಿ ಮಹಾರಾಜ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಮತ್ತು ನಿವಾಸಿಗಳು ಖಾಲಿಕೊಡ ಪ್ರದರ್ಶನ ಮಾಡಿ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಬಡಾವಣೆಯಲ್ಲಿರುವ ಪಂಚಮುಖಿ ಗಣಪತಿ ದೇವಸ್ಥಾನದ ಬಳಿ ಜಮಾವಣೆಗೊಂಡು ನಿವಾಸಿಗಳು ನಗರದ ಸರ್ ಎಂ.ವಿ ಪ್ರತಿಮೆವರೆಗೆ ಬೈಕ್ ರ್ಯಾಲಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ ನೀಡಿತು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರಿಗೆ ಮನವಿ ನೀಡಿದರು.

ಕೆ.ಎಚ್.ಬಿ ಬಡಾವಣೆ ನಿರ್ಮಾಣ ಮಾಡಿ 20 ವರ್ಷ ಕಳೆದರೂ ಇಲ್ಲಿವರೆಗೂ ಬಡಾವಣೆ ಜನತೆಗೆ ಕುಡಿಯುವ ಕಾವೇರಿ ನೀರಿನ ಸಂಪರ್ಕ ಕಲ್ಪಿಸಿಲ್ಲ. 2019ರಲ್ಲಿ ಕರ್ನಾಟಕ ಗೃಹಮಂಡಳಿ ನಗರಸಭೆಗೆ ಹಸ್ತಾಂತರ ಮಾಡಿದೆ. 6 ವರ್ಷಗಳಿಂದ ಬಡಾವಣೆ ನಿವಾಸಿಗಳು ಕಂದಾಯ ಕಟ್ಟುತ್ತಿದ್ದಾರೆ. ಆದರೆ, ಈವರೆಗೂ ನಗರಸಭೆ ಯಾವುದೇ ಮೂಲಸೌಲಭ್ಯ ಒದಗಿಸಿಲ್ಲ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ಬಿ.ಸಿ.ಶಿವಾನಂದಮೂರ್ತಿ ಅವರು, ನಗರಸಭೆಯಲ್ಲಿ ಕೆ.ಎಚ್.ಬಿ ಬಡಾವಣೆಯನ್ನು ಮತ್ತೆ ಗೃಹ ಮಂಡಳಿಗೆ ಹಸ್ತಾಂತರ ಮಾಡಲು ನಿರ್ಣಯ ಮಾಡಿದ್ದಾರೆ. ಇದಕ್ಕೆ ಅವಕಾಶವಿಲ್ಲ. ಬಡಾವಣೆಯ ನಿರ್ವಹಣೆಯನ್ನು ಬರುವ ಕಂದಾಯದಿಂದ ನಿರ್ವಹಣೆ ಮಾಡುವುದು ನಗರಸಭೆ ಜವಾಬ್ದಾರಿ. ಕೊಳವೆ ಬಾವಿ ನೀರು ಕುಲುಷಿತಗೊಂಡಿರುವ ಕಾರಣ ನಗರಸಭೆಯು ಟ್ಯಾಂಕ್ ಮೂಲಕ ಕಾವೇರಿ ನೀರು ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘದ ಗೌರವಾಧ್ಯಕ್ಷ ಸಿ.ಶ್ರೀಕಾಂತ್, ಅಧ್ಯಕ್ಷ ಹರೀಶ್ ಬಾಣಸವಾಡಿ, ಉಪಾಧ್ಯಕ್ಷ ಪುಟ್ಟಯ್ಯ, ಕಾರ್ಯದರ್ಶಿ ಅಶೋಕ್, ಸಂಘಟನಾ ಕಾರ್ಯದರ್ಶಿ ಶಶಿಧರ್, ಮುಖಂಡರಾದ ಮೋಹನ್, ಯಶಸ್ವಿನಿ, ಕಾಂತರಾಜು, ಶ್ರೀನಿವಾಸ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.