ಕೆ.ಆರ್.ಪೇಟೆ: ತಾಲ್ಲೂಕಿನ ಅನುವಿನಕಟ್ಟೆ ಬಳಿ ಇರುವ ಪೆಟ್ರೋಲ್ ಬಂಕ್ ಬಳಿ ಸೋಮವಾರ ಆಟೊ ರಿಕ್ಷಾ ಹಾಗೂ ಕಾರು ಡಿಕ್ಕಿಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

ಸಾಲಿಗ್ರಾಮ ಸಮೀಪದ ಚಿಕ್ಕನಾಯಕನಹಳ್ಳಿ ಗ್ರಾಮದ ಗಾಯತ್ರಮ್ಮ (57) ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಜೊತೆಯಲ್ಲಿದ್ದ ಸಾಲಿಗ್ರಾಮದ ಲಕ್ಷ್ಮಮ್ಮ ಅವರಿಗೂ ಪೆಟ್ಟಾಗಿದೆ. ಬಿಲ್ಲೇನಹಳ್ಳಿ ಗವಿರಂಗನಾಥಸ್ವಾಮಿ ದೇವಾಲಯಕ್ಕೆ ಹೋಗಿ ವಾಪಸ್ ಆಗುತ್ತಿದ್ದ ಆಟೊಗೆ ಹಿಂಬದಿಯಿಂದ ಬಂದ ಮಾರುತಿ ಸ್ವಿಪ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರು ಗಾಯಗೊಂಡಿದ್ದಾರೆ.

ಅಪಘಾತ ಉಂಟು ಮಾಡಿದ ಚಾಲಕನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗಾಯಾಳುವಿನ ಮಗಳು ಮಿರ್ಲೆಯ ಚಾಂದಿನಿ ಶಿವರಾಜು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-40-723991046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.