ಕೆ.ಆರ್.ಪೇಟೆ: ‘ತಾಲ್ಲೂಕಿನಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಈ ಹಿಂದೆ ನಡೆಸಿದ ಜನಸಂಪರ್ಕ ಸಭೆಯಲ್ಲಿ ಸ್ವೀಕೃತವಾದ ಅರ್ಜಿಗಳ ವಿಲೇವಾರಿಯ ಸಮರ್ಪಕವಾಗಿ ವಿಲೇವಾರಿಯಾಗಿಲ್ಲವೆಂದು ದೂರುಗಳಿವೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನಹರಿಸಿ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಪಟ್ಟಣದ ಹೊರವಲಯದ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಶಾಸಕ ಎಚ್.ಟಿ.ಮಂಜು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಮತ್ತು ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

‘ಜನಸಂಪರ್ಕ ಸಭೆಗಳನ್ನು ನಡೆಸುವ ಉದ್ದೇಶ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವುದು. ಕೊಟ್ಟ ಅರ್ಜಿಗಳು ಸಮರ್ಪಕವಾಗಿ ವಿಲೇವಾರಿಯಾಗದಿದ್ದರೆ ಜನಸಂಪರ್ಕಸಭೆಯ ಉದ್ದೇಶ ಈಡೇರುವುದಿಲ್ಲ. ಆದ್ದರಿಂದ ನಿರ್ಲಕ್ಷ್ಯ ವಹಿಸದೆ ಅರ್ಜಿಗಳನ್ನು ಪರಿಶೀಲಸಿ ಕ್ರಮ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ತಾಲ್ಲೂಕಿನ ರಂಗೇಗೌಡನಕೊಪ್ಪಲು ಗ್ರಾಮದ ನಕ್ಷೆಯಂತೆ ರಸ್ತೆಯಿದ್ದು, ಈ ರಸ್ತೆಯನ್ನು ಬದಲಾಯಿಸಿ ಹಿಡುವಳಿ ಜಮೀನಿನಲ್ಲಿ ಬಿಟ್ಟಿರುವುದು ಸರಿಯಿಲ್ಲ’ ಎಂದು ಹೇಳಿದ ಅವರು, ಮೂಲನಕ್ಷೆ ಪ್ರಕಾರ ರಸ್ತೆ ಬಿಡಿಸಲು ಹಾಗೂ ಪಥ ಬದಲಾವಣೆ ಮಾಡಲು ಕಚೇರಿಗೆ ಪ್ರಸ್ತಾವ ಸಲ್ಲಿಸಲು ತಹಶೀಲ್ದಾರರಿಗೆ ಸೂಚಿಸಿದರು.

ಸಾಸಲು ಗ್ರಾಮದ ಶಂಭುಲಿಂಗೇಶ್ವರ ಮತ್ತು ಸೋಮೇಶ್ವರ ದೇವಾಲಯಕ್ಕೆ ಸೇರಿದ ದೇವಾಲಯ ಜಾಗ ಮತ್ತು ದೇವರ ಜಮೀನಿನ ಸಂಬಂಧ ಜಮೀನನ್ನು ಸಂರಕ್ಷಣೆ ಮಾಡಲು ತುರ್ತು ಕ್ರಮ ವಹಿಸುವಂತೆ ಭೂದಾಖಲೆಗಳ ಸಹಾಯಕ ನಿರ್ದೇಶಕರು ಮತ್ತು ತಹಶೀಲ್ದಾರ್ ಅವರಿಗೆ ಸೂಚಿಸಿದರು. ಸರ್ಕಾರದಿಂದ ಆದೇಶ ಬಂದ ಕೂಡಲೇ ದೇವಾಲಯ ಸಮಿತಿಗೆ ಕಾರ್ಯನಿರ್ವಾಹಕ ಅಧಿಕಾರಿಯನ್ನು ನೇಮಕ ಮಾಡಲಾಗುವುದೆಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಟಿ.ಮಂಜು ಮಾತನಾಡಿ, ‘ತಾಲ್ಲೂಕಿನಲ್ಲಿ ತತ್ಕಾಲ್ ಪೋಡಿ, ಅಳತೆ ಕಾರ್ಯ ಎಲ್ಲವೂ ನಿಧಾನವಾಗಿ ನಡೆಯುತ್ತಿದೆ. ಈ ಬಗ್ಗೆ ಎ.ಡಿ.ಎಲ್.ಆರ್. ಹಾಗೂ ಸರ್ವೆ ಅಧಿಕಾರಿಗಳು ತುರ್ತು ಕ್ರಮ ವಹಿಸಿ ಸರ್ವೆ ಕಾರ್ಯದ ವೇಗ ಹೆಚ್ಚಿಸಿ’ ಎಂದು ಸೂಚಿಸಿದರು.

ಪೊಲೀಸ್ ಅಧಿಕಾರಿಗಳು ಹಳ್ಳಿಗಳಲ್ಲಿ ರಾತ್ರಿ ವೇಳೆ ಪಂಪ್ಸೆಟ್ನಿಂದ ನೀರು ಹಾಯಿಸಲು ಜಮೀನಿನ ಕಡೆ ಹೋಗುವ ರೈತರ ಬೈಕುಗಳನ್ನು ತಡೆದು ದಾಖಲೆ ಕೇಳುತ್ತಿರುವುದಾಗಿ ದೂರು ಬಂದಿದ್ದು, ರೈತರಿಗೆ ಅನಗತ್ಯವಾಗಿ ತೊಂದರೆ ಕೊಡಬೇಡಿ ಎಂದು ಹೇಳಿದರು.

ಜಿ.ಪಂ. ಸಿಇಒ ನಂದಿನಿ, ಹೆಚ್ಚುವರಿ ಎಸ್ಪಿ ತಿಮ್ಮಯ್ಯ, ಪಾಂಡವಪುರ ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್, ತಹಶೀಲ್ದಾರ್ ಎಸ್.ಯು.ಅಶೋಕ್, ತಾ.ಪಂ. ಇಒ ಕೆ.ಸುಷ್ಮಾ, ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-40-406356026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.