ಕೆ.ಆರ್. ಪೇಟೆ: ತಾಲ್ಲೂಕಿನ ಬಣ್ಣೇನಹಳ್ಳಿ ಸಮೀಪ ನಿರ್ಮಾಣವಾಗಿರುವ ಫೇವರಿಚ್ ಮೆಘಾ ಫುಡ್ ಪಾರ್ಕ್ ವತಿಯಿಂದ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯುವಂತೆ ಒತ್ತಾಯಿಸಿ ಬಣ್ಣೇನಹಳ್ಳಿ ಗ್ರಾಮದ ರೈತರು ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು.

2012-13 ರಲ್ಲಿ ಬಣ್ಣೇನಹಳ್ಳಿ ಗ್ರಾಮದ ರೈತರ ಭೂಮಿಯನ್ನು ವಶಪಡಿಸಿಕೊಂಡು ಫುಡ್ ಫ್ಯಾಕ್ಟರಿ ನಿರ್ಮಾಣ ಆರಂಭಿಸಲಾಗಿದ್ದು, ಫೇವರಿಚ್ ಮೆಘಾ ಫುಡ್ ಪಾರ್ಕ್ ಆಡಳಿತ ಮಂಡಳಿ ತಾನು ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ನಡೆದುಕೊಳ್ಳುತ್ತಿಲ್ಲ. ರೈತರು ತಮ್ಮ ಜಮೀನಿಗೆ ಹೋಗಲು ರಸ್ತೆ ಬಿಟ್ಟು ಕಾಂಪೌಂಡ್ ಹಾಕಿಕೊಳ್ಳುವಂತೆ ಸೂಚಿಸಿದ್ದರೂ ರೈತರ ರಸ್ತೆಯನ್ನು ಪೊಲೀಸ್ ರಕ್ಷಣೆ ಪಡೆದು ಮುಚ್ಚಿಹಾಕಲು ಮುಂದಾಗಿದೆ. ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಸಮಸ್ಯೆಯನ್ನು ವಿಧಾನಸಭೆಯಲ್ಲಿ, ಕೆಡಿಪಿ ಸಭೆಗಳಲ್ಲಿ ಪ್ರಸ್ತಾಪಿಸಿದ್ದಾರೆ. ಸಂಬಂಧಪಟ್ಟ ಇಲಾಖೆಯ ಸಚಿವರು ಸಮಸ್ಯೆ ಬಗೆಹರಿಸುವದಾಗಿಯೂ, ರೈತರಿಗೆ ನೆರವಾಗುವುದಾಗಿ ಹೇಳಿದ್ದರು. ಆದರೂ ಆಡಳಿತ ಮಂಡಳಿಯವರು ಸರ್ಕಾರದ ಸೂಚನೆಗಳನ್ನು ಪಾಲಿಸುತ್ತಿಲ್ಲ. ಸ್ಥಳೀಯರಿಗೆ ಉದ್ಯೋಗವನ್ನು ಕೊಡದೆ ಭೂಮಿಕೊಟ್ಟ ರೈತರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಮುಖಂಡರಾದ ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಬಣ್ಣೇನಹಳ್ಳಿ ಧನಂಜಯ ಮತ್ತು ವಾಠಾಳ್ ಆರೋಪಿಸಿದರು.

ಗ್ರಾಮದ ದೊಡ್ಡ ಕೆರೆಗೆ ಕಲುಷಿತ ನೀರನ್ನು ಬಿಡುವುದರಿಂದ ಕೆರೆಯು ಸಂಪೂರ್ಣವಾಗಿ ಮಲಿನವಾಗಿದ್ದು, ನೀರನ್ನು ಜಾನುವಾರುಗಳು ಕುಡಿಯುತ್ತಿಲ್ಲ. ಕೆರೆಯ ಸುತ್ತ ಮೂವತ್ತು ಅಡಿ ರಸ್ತೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ರೈತರು ತಮ್ಮ ಜಮೀನಿಗೆ ಹೋಗಲು ಅವಕಾಶ ನೀಡಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರಲ್ಲದೆ ಸಮಸ್ಯೆ ಬಗೆಹರಿಯದಿದ್ದರೆ ಫುಡ್ ಫ್ಯಾಕ್ಟರಿ ಮುಂಭಾಗದಲ್ಲಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಅಶೋಕ್ ಕುಮಾರ್ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ ಕಾರ್ಖಾನೆಯ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-40-1710021025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.