ಕೆ.ಆರ್.ಪೇಟೆ: ದೇಶದ ಹಸಿರು ಕ್ರಾಂತಿಯ ಹರಿಕಾರರಾದ ಮಾಜಿ ಉಪಪ್ರದಾನಿ ಡಾ.ಬಾಬು ಜಗಜೀವನರಾಂ ಅವರ ಜಯಂತಿಯನ್ನು ರಚನಾತ್ಮಕವಾಗಿ ಏ.5ರಂದು ಆಚರಿಸಲು ಕಾರ್ಯಕ್ರಮ ರೂಪಿಸುವಂತೆ ಶಾಸಕ ಎಚ್.ಟಿ.ಮಂಜು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಮಿನಿವಿದಾನಸೌಧದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಡಾ.ಬಾಬು ಜಗಜೀವರಾಂ ಅವರ ಜನ್ಮದಿನಾಚರಣೆ ನಡೆಯಬೇಕು. ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಕಡ್ಡಾಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಪಟ್ಟಣದ ಪ್ರವಾಸಿ ಮಂದಿರ ವೃತ್ತದಿಂದ ವೇದಿಕೆ ವರೆಗೆ ಡಾ.ಬಾಬುಜಗಜೀವನರಾಂ ಅವರ ಭಾವಚಿತ್ರವನ್ನು ಜಾನಪದ ಕಲಾತಂಡಗಳ ಮೆರೆವಣಿಗೆಯೊಂದಿಗೆ ಬೆಳ್ಳಿ ಸಾರೋಟಿನಲ್ಲಿ ಗೌರವಯುತವಾಗಿ ಮೆರವಣಿಗೆ ಮಾಡಿ ಗೌರವ ಸಲ್ಲಿಸಬೇಕು. ಡಾ.ಬಾಬು ಜಗಜೀವನರಾಂ ಅವರ ಜೀವನ ಸಾಧನೆಗಳನ್ನು ಸಾರುವ ಪುಸ್ತಕಗಳನ್ನು ಹಾಗೂ ಕರಪತ್ರಗಳನ್ನು ಕಾರ್ಯಕ್ರಮದ ವೇಳೆ ಅತಿಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹಂಚಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಎಸ್.ಯು.ಅಶೋಕ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮಾ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ, ಪುರಸಭಾ ಮುಖ್ಯಾಧಿಕಾರಿ ಅಶೋಕ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ದಿವಾಕರ್, ಪೊಲೀಸ್ ವೃತ್ತ ನಿರೀಕ್ಷಕ ಸುನಿಲ್ ಕುಮಾರ್, ಪ್ರಮುಖರಾದ ಆರ್.ಕೆ.ಕುಮಾರ್, ಬಿ.ಬಿ.ಕಾವಲು ಕಾಂತರಾಜು, ಎಚ್.ಎಂ.ಪುಟ್ಟರಾಜು, ರಾಯಸಮುದ್ರ ಆರ್.ಟಿ.ಉಮೇಶ್, ಹೊಸಹೊಳಲು ಶಿವಣ್ಣ, ಸೇರಿದಂತೆ ಹಲವು ಗಣ್ಯರು , ವಿವಿಧ ಇಲಾಖೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-40-1433179411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.