ಮದ್ದೂರು: ‘ಸ್ವಾತಂತ್ರ್ಯಪೂರ್ವ ಸೇರಿದಂತೆ ಕೆ.ಆರ್.ಎಸ್ ಆಣೆಕಟ್ಟು ನಿರ್ಮಾಣವಾದಾಗ ನಿರ್ಮಿಸಿದ್ದ ದುಃಸ್ಥಿತಿಯಲ್ಲಿದ್ದ ನಾಲೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ’ ಎಂದು ಶಾಸಕ ಕೆ, ಎಂ ಉದಯ್ ತಿಳಿಸಿದರು.

ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದಲ್ಲಿ ₹3.50 ಕೋಟಿ ವೆಚ್ಚದ ನಾಲಾ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಬೆಸಗರಹಳ್ಳಿ ಬಳಿಯ ಪಣ್ಣೆದೊಡ್ಡಿ ಗ್ರಾಮದ ವ್ಯಾಪ್ತಿಯಲ್ಲಿರುವ ಕಾವೇರಿ ನೀರಾವರಿ ನಿಗಮದ 24ನೇ ವಿತರಣಾ ನಾಲೆಯು ಹಲವು ದಶಕಗಳಿಂದ ಯಾವುದೇ ಅಭಿವೃದ್ಧಿಯನ್ನು ಕಂಡಿಲ್ಲದೇ ದುಃಸ್ಥಿತಿಯಲ್ಲಿತ್ತು. ಇದರಿಂದಾಗಿ ಈ ಭಾಗದ ರೈತರ ಜಮೀನುಗಳಿಗೆ ನೀರು ಹರಿಯಲು ತೊಂದರೆಯಾಗುತ್ತಿತ್ತು. ಈ ಬಗ್ಗೆ ಎಷ್ಟೋ ಬಾರಿ ಗ್ರಾಮಸ್ಥರು ನನ್ನ ಗಮನಕ್ಕೆ ತಂದಿದ್ದರು. ಇದರಿಂದ ನಾಲೆಯ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ’ ಎಂದರು.

‘ಈ ಗ್ರಾಮದ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಮೂಲಸೌಲಭ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಸಾಕಷ್ಟು ಅನುದಾನ ನೀಡುವ ಮೂಲಕ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಈಗಾಗಲೇ ಮಾಡಲಾಗಿದೆ’ ಎಂದರು.

ಗ್ರಾಮದ ಮುಖಂಡರಾದ ಸುಧಾಕರ್, ಮುರಳಿ, ಧನಂಜಯ, ಬಡ್ಡಿ ತಿಮ್ಮಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಜಯ್, ಚಂದ್ರು, ಕೃಷ್ಣ, ರಾಮೇಗೌಡ, ಶಿವರಾಮಣ್ಣ, ಕಿರಣ್, ಸಿದ್ದೇಗೌಡ, ಮಹದೇವು, ಕುಮಾರ್, ನವೀನ್, ಆನೆದೊಡ್ಡಿ ರಾಮಣ್ಣ,ಗೋವಿಂದ, ನೀರಾವರಿ ಇಲಾಖೆಯ ಎಇಇ ನಾಗರಾಜು, ಕೆಆರ್ಡಿಎಲ್ನ ಎಂಜಿನಿಯರ್ ರಾಕೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-40-966118232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.