ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾರಾಜ ಕಲಾ ಬಳಗ ಸಹಯೋಗದಲ್ಲಿ ಮೇ 23ರಂದು ಬೆಳಿಗ್ಗೆ 10ಕ್ಕೆ ‘ಕುರುಕ್ಷೇತ್ರ’ ನಾಟಕ ಪ್ರದರ್ಶನ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಗರದಲ್ಲಿ ನಡೆಯಲಿದೆ ಎಂದು ಕಲಾವಿದ ಹರೀಶ್ ಬಾಣಸವಾಡಿ ಹೇಳಿದರು.

‘ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆಯುವ ನಾಟಕ ಪ್ರದರ್ಶನದ ನಂತರ ಮಧ್ಯಾಹ್ನ 3ಕ್ಕೆ ನಡೆಯುವ ಕಾರ್ಯಕ್ರಮವನ್ನು ಸಮಾಜ ಸೇವಕ ಯೋಗಾನಂದ ಕೆರಗೋಡು ಉದ್ಘಾಟಿಸುವರು. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು. ತಿಮ್ಮದಾಸ್ ಗ್ರೂಪ್ ಮಾಲೀಕ ಸಿ.ಟಿ.ಶಂಕರ್ ಭಾಗವಹಿಸುವರು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ಅವರಿಗೆ ‘ರೈತ ಮಿತ್ರ’ ಮಮತಾ ನರ್ಸಿಂಗ್ ಹೋಂ ಮಾಲೀಕ ಡಾ.ಎಚ್.ಸಿ.ಆನಂದ್ ಅವರಿಗೆ ‘ವೈದ್ಯ ರತ್ನ’ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂಕೇಗೌಡ ಅವರಿಗೆ ‘ಪುಸ್ತಕ ರತ್ನ’ ಹಾಗೂ ಕೀರ್ತನಕಾರ ಶಿವಾರ ಉಮೇಶ್ ಅವರಿಗೆ ‘ಕಲಾ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.

ಪಿಇಟಿ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ, ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ನಿರ್ದೇಶಕ ಬಿ.ಆರ್.ರಾಮಚಂದ್ರ, ನಗರಸಭೆ ಮಾಜಿ ಅಧ್ಯಕ್ಷರಾದ ಎಚ್.ಎಸ್.ಮಂಜುನಾಥ್, ನಾಗೇಶ್ ಆಗಮಿಸುವರು. ನಾಟಕ ಪ್ರದರ್ಶನ ಸಂಬಂಧ ಮೇ 21ರಂದು ಹಲವು ಗ್ರಾಮಗಳಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಹಾಸನ, ಮೈಸೂರು, ಚನ್ನರಾಯಪಟ್ಟಣ, ಬೆಂಗಳೂರಿನಿಂದಲೂ ಕಲಾಸಕ್ತರು ಆಗಮಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಂಡ್ಯ ಜಿಲ್ಲೆ ಜನ ಬಂದು ಆಶೀರ್ವದಿಸಬೇಕು’ ಎಂದು ಮನವಿ ಮಾಡಿದರು.

ಕೆಎಚ್ಬಿ ಮಹಾರಾಜನಗರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಅಶೋಕ್, ಖಜಾಂಚಿ ಜಿ.ಪಿ.ಶಶಿಧರ್, ಪದಾಧಿಕಾರಿಗಳಾದ ಮಹಾದೇವಸ್ವಾಮಿ, ಕೃಷ್ಣೇಗೌಡ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-40-715815307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.