ಮಂಡ್ಯ: ಬಂಡವಾಳಶಾಹಿ ಮತ್ತು ಕಾರ್ಪೊರೇಟ್ ಮಾಲೀಕರ ಹಿತ ಕಾಯುವುದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಹೊರಟಿವೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸಿಐಟಿಯು ಕಚೇರಿ ಸಭಾಂಗಣದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ (ಮೇ ಡೇ) ಅಂಗವಾಗಿ ಶುಕ್ರವಾರ ನಡೆದಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೇರಳದಲ್ಲಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ವಿ.ಗೋಪಾಲಗೌಡ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕರ ಕರಾಳ ಕಾನೂನು ರದ್ದು ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯಕ್ಕೆ ಸೆಡ್ಡು ಹೊಡೆದಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಕಾರ್ಮಿಕರ ವಿರೋಧಿಯಾಗಿ ನಡೆದುಕೊಂಡು ಸಲ್ಲದ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವುದು ದುರಂತ’ ಎಂದು ವಿಷಾದಿಸಿದರು.

‘ಏಪ್ರಿಲ್ ನಂತರ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲು ನಿರ್ಧರಿಸಿರುವ ಕೇಂದ್ರ ಸರ್ಕಾರ ನಡೆ ಅತ್ಯಂತ ಖಂಡನೀಯ. ಇದರ ವಿರುದ್ಧ ಹೋರಾಟ ಮಾಡುವ ಮೂಲಕ ರಾಜ್ಯ ಸರ್ಕಾರದ ಮೇಲೂ ಒತ್ತಡ ಹೇರಿ ಪರಿಷ್ಕರಣೆ ಮಾಡುವ ಮೂಲಕ ಯಾವುದೇ ಕಾರಣಕ್ಕೂ ಜಾರಿಗೆ ತರದಂತೆ ಆಗ್ರಹಿಸಲು ಮೇ 30 ರಂದು ರಾಜ್ಯದಾದ್ಯಂತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಸಿಐಟಿಯು ಕಾರ್ಯದರ್ಶಿ ಚಂದ್ರಶೇಖರ್ಮೂರ್ತಿ ಮಾತನಾಡಿ, ‘ಬೀದಿಬದಿ ವ್ಯಾಪಾರಿಗಳು ಮನೆಕೆಲಸದ ಮಹಿಳೆಯರು, ಅಂಗನವಾಡಿ ನೌಕರರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ದುಡಿಯುವವರು ಎಚ್ಚರಿಕೆ ವಹಿಸಿ, ತಮ್ಮ ಹಕ್ಕು ಪ್ರತಿಪಾದಿಸಲು ನಿಲ್ಲಬೇಕು. ಕಟ್ಟಡ ಕಾರ್ಮಿಕರಿಗೆ ಇರುವ ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರಿಗೆ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘ವಿಶ್ವ ಕಾರ್ಮಿಕರೇ ಒಂದಾಗಿ ನಿಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗಿ’ ಎಂಬ ಘೋಷಣೆಯೊಂದಿಗೆ ನರಗದ ಹೊಸಹಳ್ಳಿ ವೃತ್ತದಿಂದ ಸಿಐಟಿಯು ಕಚೇರಿ ಸಭಾಂಗಣದವರೆಗೆ ಮೆರವಣಿಗೆ ನಡೆಸಲಾಯಿತು.

ಮುಖಂಡರಾದ ಮಂಗಳಾ, ಪುಟ್ಟಮ್ಮ, ರಾಧಮ್ಮ, ಪ್ರೇಮಾ, ರೇಣುಕಾ, ಶ್ರೀನಿವಾಸ, ಶ್ರೀಧರ್, ನಾರಾಯಣ, ಪುಟ್ಟಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-40-1040484128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.