ಭಾರತೀನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಕೃಷಿ ಕೂಲಿಕಾರರ ಸಂಘ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಪದಾಧಿಕಾರಿಗಳು ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.

ಪಂಚಾಯಿತಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಟಿ.ಪಿ.ಅರುಣ್ ಕುಮಾರ್ ಮಾತನಾಡಿ, ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ–ಜಿ ರಾಮ್ ಜಿ ಯೋಜನೆಯು ಕೂಲಿಕಾರರಿಗೆ ಉದ್ಯೋಗ ಕೊಡದೆ ವಂಚಿಸುತ್ತಿದೆ. ನರೇಗಾ ಯೋಜನೆಯು ಕೃಷಿ ಕೂಲಿಕಾರ್ಮಿಕರು ತಮ್ಮ ಜೀವನ ಸಾಗಿಸಲು ಸಾಕಷ್ಟು ನೆರವಾಗಿತ್ತು. ಆದರೆ ಈಗ ಅದನ್ನು ರದ್ದುಗೊಳಿಸಿ ಜನರನ್ನು ಕೂಲಿಯಿಂದ ವಂಚಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ವಿಬಿ–ಜಿ ರಾಮ್ ಜಿ ಯೋಜನೆಯಲ್ಲಿ ಜಾರಿಗೊಳಿಸಿರುವ ಬಯೋಮೆಟ್ರಿಕ್ ಪದ್ಧತಿಯನ್ನು ರದ್ದುಗೊಳಿಸಬೇಕು. ಕೂಲಿಕಾರರಿಗೆ 200 ಮಾನವ ದಿನಗಳನ್ನು ನಿಗದಿಪಡಿಸಿ ಉದ್ಯೋಗ ಕೊಡಬೇಕೆಂದು’ ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಓದುಲಿಂಗ ಅವರಿಗೆ ಬೇಡಿಕೆಗಳನ್ನೊಡಗೊಂಡ ಮನವಿ ಪತ್ರವನ್ನು ಸಲ್ಲಿಸಿದರು.

ಮನವಿ ಸ್ವೀಕರಿಸಿ ಓದುಲಿಂಗ ಅವರು, ಪತ್ರವನ್ನು ಸರ್ಕಾರಕ್ಕೆ ರವಾನಿಸಲಾಗುವುದು, ಪಂಚಾಯಿತಿ ವ್ಯಾಪ್ತಿಯಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಭರವಸೆ ನೀಡಿದರು.

ರಾಜ್ಯಸಮಿತಿ ಸದಸ್ಯೆ ಚಂದ್ರಕಲಾ, ಗ್ರಾಮೀಣ ಘಟಕದ ಅಧ್ಯಕ್ಷೆ ಪುಟ್ಟಚನ್ನಮ್ಮ, ಕಾರ್ಯದರ್ಶಿ ದಿವ್ಯಾ, ಮುಖಂಡರಾದ ಶೋಭಾ, ತಮ್ಮೇಗೌಡ, ಶಿವಣ್ಣ, ಅನಿತಾ, ಭಾರತಿ, ಶಶಿಕಲಾ, ಸವಿತ, ಉಮಾ, ಹರಳಹಳ್ಳಿ ಮಂಜು, ಸರಸ್ಪತಿ, ಗೀತಾ, ನಂದಿನಿ, ಜಯಮ್ಮ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-828520821

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.