ಮಂಡ್ಯ: ನಗರದ ಗುತ್ತಲು- ಯತ್ತಗದಹಳ್ಳಿ ಕೆರೆಗೆ ತ್ಯಾಜ್ಯ ನೀರು ಸೇರುವುದನ್ನು ತಡೆಗಟ್ಟಲು ನಿರ್ಮಿಸುತ್ತಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣ ಕಾಮಗಾರಿಗಳನ್ನು ಅಗಸ್ಟ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗುತ್ತಲು ಮತ್ತು ಚಿಕ್ಕೇಗೌಡನದೊಡ್ಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣ ಕಾಮಗಾರಿಗಳು ಹಾಗೂ ನಗರದಲ್ಲಿ ಬಿಟ್ಟು ಹೋಗಿರುವ ಒಳಚರಂಡಿ ಪೈಪ್ ಲೈನ್ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಕೆರೆಗಳಿಗೆ ನಗರದ ತ್ಯಾಜ್ಯ ನೀರು ಸೇರುತ್ತಿದ್ದ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ಸ್ಥಳ ಪರಿಶೀಲನೆ ನಡೆಸುವ ಜತೆಗೆ ಲೋಕಾಯುಕ್ತದಲ್ಲೂ ಸ್ವಯಂ ಪ್ರೇರಿತರ ದೂರು ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರೆ ಅಭಿವೃದ್ಧಿಯ ಜತೆಗೆ ಕೆರೆಗೆ ತ್ಯಾಜ್ಯ ನೀರು ಸೇರುವುದನ್ನು ತಡೆಯಲು ಗುತ್ತಲು, ಚಿಕ್ಕೇಗೌಡನದೊಡ್ಡಿ ಬಳಿ ನಿರ್ಮಿಸಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಲಾಗುತ್ತಿದೆ’ ಎಂದರು.

ಪಾಂಡವಪುರ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಾಣ ಮಾಡಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾಮಗಾರಿ ಪ್ರಾರಂಭವಾಗಬೇಕಿದೆ ಎಂದು ತಿಳಿಸಿದರು.

‘ಶ್ರೀರಂಗಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ಬಳಸಿದ ನೀರು ನಿರ್ವಹಣೆ ಯೋಜನೆಯಡಿ ₹18.12 ಕೋಟಿ ಮೊತ್ತದ ಒಳಚರಂಡಿ ಮಿಸ್ಸಿಂಗ್ ಲಿಂಕ್ ಮತ್ತು 4 ವೆಟ್ವೆಲ್ಗಳ ನಿರ್ಮಾಣಕ್ಕಾಗಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಟೆಂಡರ್ ಕರೆದು ಸಿ.ವಿ.ಕೆ. ಕನ್ಸ್ಟ್ರಕ್ಷನ್ ಬೆಂಗಳೂರು ಸಂಸ್ಥೆಗೆ ಕಾಮಗಾರಿ ವಹಿಸಲಾಗಿರುತ್ತದೆ’ ಎಂದು ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಟಿ.ಎನ್. ನರಸಿಂಹಮೂರ್ತಿ, ಕಾರ್ಯಪಾಲಕ ಎಂಜಿನಿಯರ್ ಪ್ರತಾಪ್, ನಗರಸಭೆ ಪೌರಾಯುಕ್ತ ಯು.ಪಿ. ಪಂಪಾಶ್ರೀ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-40-1747314614

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.