ಪಾಂಡವಪುರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಪಟ್ಟಣದ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಮುಂದಾಗಿರುವ ಕ್ರಮಕ್ಕೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿರೋಧಿಸಿ ಪ್ರತಿಭಟನೆ ನಡೆಸಿರುವುದು ವಿಪರ್ಯಾಸದ ಸಂಗತಿ ಎಂದು ರೈತ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಎ.ಎಲ್.ಕೆಂಪೂಗೌಡ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ ಅವರು, ಪುರಸಭೆಯಲ್ಲಿ ಜೆಡಿಎಸ್ನ ಆಡಳಿತ ಮಂಡಳಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಆಶ್ರಯ ಸಮಿತಿ ಸಭೆಯಲ್ಲಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ 176 ನಿವೇಶನ ಹಂಚಿಕೆ ಮಾಡಲು ನಿರ್ಣಯ ಮಾಡಲಾಗಿದೆ. ನಗರಾಭಿವೃದ್ದಿ ಇಲಾಖೆ ಕೂಡ

ಲಭ್ಯವಿರುವ ನಿವೇಶನಗಳನ್ನು ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳದಿರುವುದಕ್ಕೆ ಪುರಸಭೆ ಮುಖ್ಯಾಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಹೀಗಾಗಿ ಶಾಸಕರು ನಿವೇಶನ ಹಂಚಿಕೆಗೆ ಕ್ರಮವಹಿಸಿದ್ದಾರೆ. ಬಡವರಿಗೆ ನಿವೇಶನ ಹಂಚಿಕೆ ಮಾಡುವುದನ್ನು ವಿರೋಧಿಸುವುದು ಸರಿಯಲ್ಲ ಎಂದರು.

ಜೆಡಿಎಸ್ನ ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಬಾಬು ಮತ್ತು ಸದಸ್ಯರು ನಿವೇಶನ ಹಂಚಿಕೆಗೆ ಒಪ್ಪಿಗೆ ನೀಡಿದ್ದಾರೆ. ಆದರೆ, ಮಾಜಿ ಸಚಿವರು ವಿರೋಧವ್ಯಕ್ತಪಡಿಸುವುದನ್ನು ನೋಡಿದರೆ ನಿವೇಶನದಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಆರೋಪಿಸಿದರು.

ಪುರಸಭೆ ವ್ಯಾಪ್ತಿಯ ಹಾರೋಹಳ್ಳಿ ಬಳಿಯ 176 ನಿವೇಶನಗಳನ್ನು ಅದೇ ಗ್ರಾಮದ ಬಡವರಿಗೆ ವಿತರಿಸಬೇಕು ಎಂದು ಮಾಜಿ ಸಚಿರು ಹೇಳಿದ್ದಾರೆ. ಅವರು ಶಾಸಕರಾಗಿದ್ದಾಗ ಅದೇ ಬಡವರಿಗೆ ಹಂಚಬೇಕಾದ ನಿವೇಶನವನ್ನು ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಕಾಯ್ದಿರಿಸಬೇಕು ಎಂದು ಪುರಸಭೆ ಆಡಳಿತ ಮಂಡಳಿಗೆ ಸೂಚಿಸಿದ್ದರು. ಅಂದು ಹಾರೋಹಳ್ಳಿ ಬಡವರ ಬಗ್ಗೆ ಇರಲಿಲ್ಲವೇ? ನಿವೇಶನ ರಹಿತರಿಗೆ ಚಂದ್ರೆ ಗ್ರಾಮದ ಬಳಿ 25 ಎಕರೆ ಜಮೀನು ಗುರುತಿಸಿ ಕ್ರಮವಹಿಸಿದ್ದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ನೀವು ಸರ್ಕಾರದೊಂದಿಗೆ ನಡೆಸಿರುವ ಪ್ರಕ್ರಿಯೆಯ ದಾಖಲೆಗಳನ್ನು ಬಿಡುಗಡೆ ಮಾಡುವಿರಾ ಎಂದು ಕೆಂಪೂಗೌಡ ಸವಾಲು ಹಾಕಿದರು.

ಸರ್ವೋದಯ ಕರ್ನಾಟಕ ಪಕ್ಷದ ಮುಖಂಡ ಹಾರೋಹಳ್ಳಿ ಸೋಮಶೇಖರ್ ಮಾತನಾಡಿ, 1998ರಲ್ಲಿ ಅಂದಿನ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರು ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಂಡು ಬಡಾವಣೆ ಮಾಡಿ ನಿಯಮದಂತೆ ಪಟ್ಟಣದ 1051 ಬಡವರಿಗೆ ನಿವೇಶನ ಹಂಚಿಕೆ ಮಾಡಿದ್ದರು. ಆದರೆ, 2005–6ರಲ್ಲಿ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅವರು 300–400 ನಿವೇಶನವನ್ನು ಹಂಚಿಕೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಭೂ ಸ್ವಾಧೀನ ಮಾಡಿಕೊಳ್ಳದೇ, ಬಡಾವಣೆ ನಿರ್ಮಿಸದೆ ನಿವೇಶನ ಹಂಚಿಕೆ ಮಾಡಿದ್ದಾರೆ. ತನಿಖೆಯಾಗಿ ಅಕ್ರಮ ಹಂಚಿಕೆ ಎಂದಾದರೆ, ಮನೆ ನಿರ್ಮಿಸಿಕೊಂಡಿರುವ ಜನರ ಸ್ಥಿತಿ ಏನು ಎಂದು ಪ್ರಶ್ನಿಸಿದರು. ಜಿ.ಪಂ.ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ವೈ.ಪಿ.ಮಂಜುನಾಥ್, ಕಾರ್ಯದರ್ಶಿ ಅಶೋಕ್, ಮಹಿಳಾ ನಾಯಕಿ ರೂಪ ಅರಳಕುಪ್ಪೆ, ಪುರಸಭೆ ನಾಮಿನಿ ಸದಸ್ಯರಾದ ಎಚ್.ಎಲ್.ಮುರುಳೀಧರ್, ಪಟೇಲ್ ರಮೇಶ್, ಮಾಜಿ ಅಧ್ಯಕ್ಷರಾದ ಡಿ.ಹುಚ್ಚೇಗೌಡ, ಮೊದಲಿಯಾರ್ ವೆಂಕಟೇಶ್, ಟಿಎಪಿಸಿಎಎಂಸ್ ನಿರ್ದೇಶಕ ಟಿ.ಎಸ್.ಹಾಳಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-40-1943608416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.