ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ ಲೋಕಸಭಾ ಅಭ್ಯರ್ಥಿ ಶೀಘ್ರದಲ್ಲೇ ಘೋಷಣೆ: ಚೆಲುವರಾಯಸ್ವಾಮಿ

Published 24 ಜನವರಿ 2024, 13:37 IST
Last Updated 24 ಜನವರಿ 2024, 13:37 IST
ಅಕ್ಷರ ಗಾತ್ರ

ಮದ್ದೂರು: ‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಪಟ್ಟಣದ ಶಿವಪುರದಲ್ಲಿ ಬುಧವಾರ ಸುದ್ಧಿಗಾರರ ಜೊತೆ ಮಾತನಾಡಿದ ಅವರು, ‘ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಅಂತಿಮವಾಗಿದೆ. ಇಷ್ಟರಲ್ಲೇ ಪಕ್ಷದ ವರಿಷ್ಠರು ಘೋಷಣೆ ಮಾಡಲಿದ್ದಾರೆ’ ಎಂದರು.

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸ್ಪರ್ದಿಸುವ ಸಾಧ್ಯತೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆ ಬಗ್ಗೆ ಗೊತ್ತಿಲ್ಲ. ಯಾರೇ ಸ್ಪರ್ಧಿಸಿದರೂ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದರು.

ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂಬುದಕ್ಕೆ ಉತ್ತರಿಸಿದ ಅವರು, ‘ಅವರು ಆ ರೀತಿ ಏಕೆ ಹೇಳಿಕೆ ಕೊಟ್ಟಿದ್ದಾರೆಯೋ ಗೊತ್ತಿಲ್ಲ, ಪಕ್ಷದೊಳಗೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಅವೆಲ್ಲಾ ಮುಂದಿನ ದಿನಗಳಲ್ಲಿ ಬಗೆಹರಿಯುತ್ತವೆ’ ಎಂದು ತಿಳಿಸಿದರು.

ಸಂಸದೆ ಸುಮಲತಾ ಅಂಬರೀಷ್ ಕಾಂಗ್ರೆಸ್ ಪಕ್ಷಕ್ಕೆ ಬರುವ ಕುರಿತು, ‘ನನಗೇನು ಗೊತ್ತಿಲ್ಲ’ ಎಂದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT