ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿರ ಮತ ಕುಸಿದರೂ ತಲೆತಗ್ಗಿಸಬೇಕಾಗುವುದು: ಸಚಿವ ಚೆಲುವರಾಯಸ್ವಾಮಿ

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ
Published 26 ಮಾರ್ಚ್ 2024, 13:54 IST
Last Updated 26 ಮಾರ್ಚ್ 2024, 13:54 IST
ಅಕ್ಷರ ಗಾತ್ರ

ಮದ್ದೂರು: ‘ಈ ಬಾರಿಯ ಲೋಕಸಭಾ ಚುನಾವಣೆಯು ಜಿಲ್ಲೆಯ ಸ್ವಾಭಿಮಾನದ ವಿಷಯವಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಪಡೆದಿರುವುದಕ್ಕಿಂತ 1 ಸಾವಿರ ಮತಗಳು ಕಡಿಮೆಯಾದರೂ ತಲೆ ತಗ್ಗಿಸಬೇಕಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

ಪಟ್ಟಣದದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ  ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ನುಡಿದಂತೆ ನಡೆದು 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ. ₹36 ಸಾವಿರ ಕೋಟಿ ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿದ್ದು, ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದೆ.,  ನೀರಾವರಿ, ರಸ್ತೆ ಮುಂತಾದ ಸೌಕರ್ಯಗಳ ಅಭಿವೃದ್ಧಿಗೆ ಗಮನಹರಿಸಲಾಗಿದೆ ಎಂದರು.

ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ವಿಧಾನಸಭಾ ಚುನಾವಣೆಯಲ್ಲಿ ಕದಲೂರು ಉದಯ್ ಅವರನ್ನು ಗೆಲ್ಲಿಸಿದ್ದಕ್ಕಿಂತ ಹೆಚ್ಚು ಮತಗಳನ್ನು ಮದ್ದೂರು ಕ್ಷೇತ್ರ ನೀಡುತ್ತದೆ ಎಂಬ ಭರವಸೆಯಿದೆ ಎಂದರು.

ಚನ್ನಪಟ್ಟಣ ನನ್ನ ಕರ್ಮಭೂಮಿ ಎನ್ನುತ್ತಿದ್ದವರು ಈಗ ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಯಾಗುತ್ತಾರೆ ಎಂಬ ಮಾತಿದೆ ಆದರೆ ಹಾಗಾದರೆ ಚನ್ನಪಟ್ಟಣದ ಜನತೆಗೆ ಏನು ಉತ್ತರ ಕೊಡುತ್ತಾರೆ ? ಇಲ್ಲಿ ಬಂದು ಏನು ಹೇಳುತ್ತಾರೆ? ಎಂದು  ಜೆಡಿಎಸ್‌ ನಾಯಕ ಎಚ್. ಡಿ ಕುಮಾರಸ್ವಾಮಿ ಅವರ ಸ್ಪರ್ಧೆಯ ಕುರಿತು ಪರೋಕ್ಷವಾಗಿ ಲೇವಡಿ ಮಾಡಿದರು.

ಶಾಸಕ ಕದಲೂರು ಉದಯ್ ಮಾತನಾಡಿ, ಸ್ಟಾರ್ ಚಂದ್ರು ಅವರು ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಗೆಲ್ಲಿಸಲು ಕಾರ್ಯಕರ್ತರುಗಳು ಒಟ್ಟಾಗಿ ದುಡಿಯಬೇಕು ಎಂದರು. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೆಗೌಡ ಹಾಗೂ  ಬಿ. ರಾಮಕೃಷ್ಣ, ಮರಿತಿಬ್ಬೆಗೌಡ ಮಾತನಾಡಿದರು.

ರಮೇಶ್ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ. ಡಿ ಗಂಗಾಧರ್, ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡರಾದ ದೇಶಹಳ್ಳಿ ಮೋಹನ್ ಕುಮಾರ್, ಜಿ. ಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಮನ್ ಮುಲ್ ನಿರ್ದೇಶಕ ಹರೀಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT