ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಖಿಲ್‌, ಸುಮಲತಾ ಬೆಂಬಲಿಗರ ಘರ್ಷಣೆ

Last Updated 2 ಮೇ 2019, 11:32 IST
ಅಕ್ಷರ ಗಾತ್ರ

ಮಂಡ್ಯ: ಅಂಬರೀಷ್‌ ಹುಟ್ಟೂರು, ಮದ್ದೂರು ತಾಲ್ಲೂಕು ದೊಡ್ಡರಸಿನಕೆರೆ ಹಾಗೂ ಮಳವಳ್ಳಿ ತಾಲ್ಲೂಕು ಬಸವನಪುರ ಮತಗಟ್ಟೆಗಳ ಸಮೀಪ ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಕೆ.ನಿಖಿಲ್ ಹಾಗೂ ಪಕ್ಷೇತರ ಅಭ್ಯರ್ಥಿ ಎ.ಸುಮಲತಾ ಬೆಂಬಲಿಗರ ನಡುವೆ ಗುರುವಾರ ಘರ್ಷಣೆ ನಡೆದಿದೆ.

ನಿಖಿಲ್‌ ತಮ್ಮ ಕಾರಿನ ಫುಟ್‌ಬೋರ್ಡ್‌ ಮೇಲೆ ನಿಂತು ಜನರತ್ತ ಕೈ ಬೀಸುತ್ತಾ ದೊಡ್ಡರಸಿನಕೆರೆ ಮತಗಟ್ಟೆ ಬಳಿ ಬಂದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸುಮಲತಾ ಬೆಂಬಲಿಗರು, ಬಹಿರಂಗ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ನಿಖಿಲ್‌ ಎದುರಲ್ಲೇ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಕಾರ್ಯಕರ್ತರು ಪರಸ್ಪರ ಹಲ್ಲೆ ಮಾಡಿಕೊಂಡರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.

ಹಲ್ಲೆ: ಮಳವಳ್ಳಿಯ ಬಸವನಪುರ ಗ್ರಾಮದ ಮತಗಟ್ಟೆಯಲ್ಲಿ ಸುಮಲತಾ ಪರ ಏಜೆಂಟ್‌ ಚನ್ನಬಸವಣ್ಣ ಮೇಲೆ ಮತಗಟ್ಟೆಯೊಳಗೆ ಹಲ್ಲೆ ನಡೆದಿದೆ.

ಜೆಡಿಎಸ್‌ ಕಾರ್ಯಕರ್ತರು ವಯಸ್ಸಾದವರನ್ನು ಕರೆತಂದು ಅವರೇ ಮತದಾನ ಮಾಡುತ್ತಿದ್ದಾರೆ ಎಂದು ಚನ್ನಬಸವಣ್ಣ ಆಕ್ಷೇಪಿಸಿದರು. ಜೆಡಿಎಸ್‌ ಕಾರ್ಯಕರ್ತರು ಹಲ್ಲೆ ಮಾಡಿ ಶರ್ಟ್‌ ಹರಿದು ಹಾಕಿದರು. ಗಲಾಟೆ ನಡೆದರೂ ಪೊಲೀಸರು, ಮತಗಟ್ಟೆ ಸಿಬ್ಬಂದಿ ಮೂಕ ಪ್ರೇಕ್ಷಕರಾಗಿದ್ದರು ಎಂದು ಸಾರ್ವಜನಿಕರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT