ಮಂಡ್ಯ: ‘ಮಂಡ್ಯ ಮತ್ತು ಮಳವಳ್ಳಿ ತಾಲ್ಲೂಕಿನ 256 ಪ್ರಕರಣಗಳಿಗೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 124 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಅಧಿಕಾರಿಗಳ ಜಡತ್ವ ಹೋಗಿಸಲು ಮಂಡ್ಯಕ್ಕೆ ಮತ್ತೆ 6 ತಿಂಗಳ ನಂತರ ಭೇಟಿ ಕೊಡುತ್ತೇನೆ’ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದರು.

‘ನಗರದ ಅಂಬೇಡ್ಕರ್ ಭವನದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆ ಮತ್ತು ವಿಲೇವಾರಿ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು. ಹಾಸ್ಟೆಲ್, ಗುತ್ತಲು ಕೆರೆ ಸೇರಿದಂತೆ ಒಟ್ಟು 7 ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಿದ್ದೇನೆ. 5 ಸುಮೊಟೊ ಪ್ರಕರಣ ದಾಖಲಿಸಲು ಕ್ರಮ ಕೈಗೊಂಡಿದ್ದೇನೆ. ಹಾಸ್ಟೆಲ್ಗಳ ಸ್ಥಿತಿ ಚಿಂತಾಜನಕವಾಗಿದ್ದು, 15 ದಿನದೊಳಗೆ ವಿಶಾಲವಾದ ಹಾಸ್ಟೆಲ್ಗೆ ವಿದ್ಯಾರ್ಥಿನಿಯರನ್ನು ಸ್ಥಳಾಂತರಿಸಲು ಸೂಚಿಸಿದ್ದೇನೆ’ ಎಂದರು.

‘ಹಾಲಹಳ್ಳಿ ಬಡಾವಣೆಗೆ ಒಂದೇ ದಿನದಲ್ಲಿ ಬೀದಿದೀಪ ಹಾಕಿಸಿದ್ದೇನೆ. ನಗರದಾದ್ಯಂತ ಹಾಕಿದ್ದ ಅನಧಿಕೃತ ಫ್ಲೆಕ್ಸ್ಗಳನ್ನು ಅರ್ಧ ದಿನದಲ್ಲಿ ತೆರವುಗೊಳಿಸುವಲ್ಲಿ ಸಾಧ್ಯವಾಗಿದೆ. ಸಂಘ ಸಂಸ್ಥೆಗಳು ಸರ್ಕಾರಿ ಸಂಸ್ಥೆಯ ನಾಮಫಲಕ ಬಳಸುವುದು ಗಮನಕ್ಕೆ ಬಂದಿದೆ. ಖಾಸಗಿ ವಾಹನಗಳು ಈ ರೀತಿ ನಾಮಫಲಕ ಮತ್ತು ಲೋಗೊ ದುರ್ಬಳಕೆ ಮಾಡಿಕೊಂಡರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಎಸ್ಪಿ ಅವರಿಗೆ ಸೂಚನೆ ನೀಡಿದ್ದೇನೆ’ ಎಂದರು.

‘ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯನ್ನು ದೇವರೇ ಕಾಪಾಡಬೇಕು. ಈ ಎರಡು ಇಲಾಖೆಯಲ್ಲಿ ಕೆಳಹಂತದ ಅಧಿಕಾರಿಗಳ ಭ್ರಷ್ಟಾಚಾರ ಮಿತಿ ಮೀರಿದೆ. ಈ ಬಗ್ಗೆ ಇಲಾಖೆ ಮುಖ್ಯಸ್ಥರು ಗಮನಹರಿಸುತ್ತಿಲ್ಲ. ಕೆಳಹಂತದ ಅಧಿಕಾರಿಗಳು ನಡೆಸುತ್ತಿರುವ ಮೋಸ ಹಾಗೂ ಭ್ರಷ್ಟಾಚಾರವನ್ನು ಹಿರಿಯ ಅಧಿಕಾರಿಗಳು ಗಮನಿಸುತ್ತಿಲ್ಲ. ಅವರು ನೀಡುವ ಕಡತಗಳಿಗೆ ಸಹಿ ಹಾಕುತ್ತಿದ್ದೀರಿ. ನೀವು ಸತ್ಯಾಸತ್ಯತೆಯನ್ನು ಅರಿಯದಿರುವುದರಿಂದ ಭ್ರಷ್ಟಾಚಾರ ಮೀತಿ ಮೀರಿದೆ. ಕರ್ತವ್ಯಲೋಪವೆಸಗುತ್ತಿರುವ ನಾಲ್ವರು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಆನಂತರ ಉಳಿದವರು ಸರಿ ಹೋಗುತ್ತಾರೆ’ ಎಂದರು.

ಮಂಡ್ಯ ತಾಲ್ಲೂಕಿನ ಸಂತೆಕಸಲಗೆರೆ ಗ್ರಾಪಂಗೆ ಸೇರಿದ ನಗರ ಸಮೀಪದ ಗೋಮಾಳವನ್ನು ಪ್ರಭಾವಿಗಳು ಅತಿಕ್ರಮಿಸಿ 1.25 ಎಕರೆಯಲ್ಲಿ ಅಕ್ರಮವಾಗಿ ಲೇಔಟ್ ಮಾಡಿರುವ ಸಂಬಂಧ ದೂರಿನ ಪರಿಶೀಲನೆ ವೇಳೆ ಸರಿಯಾದ ಮಾಹಿತಿ ಕೊಡದ ತಾಲ್ಲೂಕು ಪಂಚಾಯಿತಿ ಇಒ ಲೋಕೇಶ್ಗೆ ಉಪ ಲೋಕಾಯುಕ್ತ ಬಿ.ವೀರಪ್ಪ ಚಳಿ ಬಿಡಿಸಿದರು.

ರಾಜಕಾಲುವೆ ಮತ್ತು ನಾಲೆಗಳನ್ನು ಅಕ್ರಮವಾಗಿ ಮುಚ್ಚಿಹಾಕಿ ನಿವೇಶನ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡಿದ್ದಾರೆ. ಈ ಬಗ್ಗೆ ಬೋರೇಗೌಡ ಎಂಬವರು ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು. ಅಂತೆಯೇ 45 ಅಡಿ ಇದ್ದ ರಾಜಕಾಲುವೆಯನ್ನು ಮುಚ್ಚಿ ಈಗ 5 ಅಡಿಗೆ ತಂದು ನಿಲ್ಲಿಸಿದ್ದಾರೆ. ನಿಮ್ಮ ಪಿಡಿಒ ಏನು ಮಾಡುತ್ತಿದ್ದಾರೆ? ಎಂದು ಖಾರವಾಗಿ ಪ್ರಶ್ನಿಸಿದರು.

ಕಾಗೇಪುರ ಬಿಲ್ಡಿಂಗ್ ಸಮೀಪ ಸಾರಿಗೆ ಬಸ್ ನಿಲ್ಲಿಸಬೇಕು ಮತ್ತು ಹೊಲಕ್ಕೆ ಹೋಗುವ ರಸ್ತೆ ಒತ್ತುವರಿ ತೆರವುಗೊಳಿಸಬೇಕು ಎಂದು ಮನವಿ ಮಾಡಿದ್ದರು. ಈ ಎರಡು ಪ್ರತ್ಯೇಕ ಪ್ರಕರಣದಲ್ಲಿ ಸಾಮಾಜಿಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಹಿರಿಯರಿಬ್ಬರು ಹಲವು ತಿಂಗಳಿಂದ ನಡೆಸಿಕೊಂಡು ಬಂದಿದ್ದ ಹೋರಾಟಕ್ಕೆ ಸಭೆಯಲ್ಲಿ ಜಯ ಸಿಕ್ಕಿತು. ಅಂತೆಯೇ ಇಬ್ಬರ ಸಾಮಾಜಿಕ ಕಳಕಳಿಗೆ ಬಿ.ವೀರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಧ್ಯದ ಕ್ಯಾಮೆರಾಗಳು ಗನ್ಗಳಿದ್ದಂತೆ. ಧರ್ಮದ ರಕ್ಷಣೆಗೆ, ದುಷ್ಟರ ಸಂಹಾರಕ್ಕಾಗಿ ಆ ಗನ್ ಉಪಯೋಗಿಸಿ. ನಾನೂ ಒಂದು ರೀತಿ ಗನ್ನಂತೆ ಆಗಿದ್ದೇನೆ. ನೀವೆಲ್ಲರು ಸಹಕಾರ ಕೊಟ್ಟರೆ ಇನ್ನಷ್ಟು ಸಮರ್ಥವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಲೋಕಾಯುಕ್ತ ಉಪ ನಿಬಂಧಕ ಅರವಿಂದ್, ಜಿಲ್ಲಾಧಿಕಾರಿ ಕುಮಾರ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಶೋಭಾರಾಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ.ಎಸ್. ಸತ್ಯಾನಂದ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-40-804815260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.