ಮದ್ದೂರು: ಸಚಿವ ಎನ್.ಚಲುವರಾಯ ಸ್ವಾಮಿ ಅವರ ಜನ್ಮದಿನದ ಅಂಗವಾಗಿ ಕೊಪ್ಪ 1 ಮತ್ತು 2ನೇ ವೃತ್ತದ ಅವರ ಅಭಿಮಾನಿ ಬಳಗ ಜೂನ್ 1 ರಂದು ಕೊಪ್ಪ ಗ್ರಾಮದ ಶ್ರೀಪಟ್ಟಲದಮ್ಮ ದೇವಸ್ಥಾನ ಹಾಗೂ ಯಂಬಾರ್ಜಿಯರ್ ಮಠದ ಆವರಣದಲ್ಲಿ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ತಿಳಿಸಿದರು.

ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯ ತಜ್ಞ ವೈದ್ಯ ತಂಡ ಆಯೋಜಿಸಿರುವ ಉಚಿತ ಆರೋಗ್ಯ ಶಿಬಿರದ ಉದ್ಘಾಟನೆಯನ್ನು ಮಠದ ಕಿರಿಯ ಸ್ವಾಮಿಜಿ ಸತ್ಕೀರ್ತಿನಾಥ ಸ್ವಾಮೀಜಿ ನೆರವೇರಿಸಲಿದ್ದು, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ, ಡಿ. ಸಿ. ಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆರೋಗ್ಯ ಇಲಾಖೆಯ ಶುಶ್ರೂಷಕಿ ಯರು, ಆಶಾ ಕಾರ್ಯಕರ್ತೆಯರು , ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅಭಿನಂದನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಂಜೆ 7 ಗಂಟೆಗೆ ಚಂದ್ರಪ್ರಭ ಮತ್ತು ವಿನೋದ್ ಗೊಬ್ರಗಾಲ ಅವರಿಂದ ಮನೋರಂಜನೆನಡೆಯಲಿದೆ ಎಂದರು. ಎಂ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗೀಗೌಡ, ಮನ್ಮುಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ತಾ.ಪಂ ಮಾಜಿ ಉಪಾಧ್ಯಕ್ಷ ಬಿ.ಎಂ.ರಘು, ಮಾಜಿ ಸದಸ್ಯ ತೋಯಜಾಕ್ಷ, ವಿ.ಎಸ್.ಎಸ್.ಎನ್.ಬಿ. ಅಧ್ಯಕ್ಷ ಶಿವಲಿಂಗಯ್ಯ, ಗ್ರಾಪಂ ಮಾಜಿ ಸದಸ್ಯರಾದ ರಮೇಶ್ ಗೌಡ,ಪರ್ವೀಜ್ ಅಹಮ್ಮದ್,ಗಿರೀಶ್, ನವೀನ್ ಕುಮಾರ್,ಸಂತೋಷ್ ಕೊಟ್ಟಿಗೆಯಾರ್, ಸುರೇಶ್, ರುದ್ರೇಶ್, ಕಿರಂಗೂರು ಅಪ್ಪಾಜಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-40-901135503

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.