ಮದ್ದೂರು: ನಗರದ ಮುಖಂಡ ಜಗದೀಶ್ ಹಾಗೂ ಅವರ ಪತ್ನಿ ಟಿಎಪಿಸಿಎಂಎಸ್ ಮಾಜಿ ನಿರ್ದೇಶಕಿ ಅಮೂಲ್ಯ ಅವರು ಜೆಡಿಎಸ್ ಅನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಶಾಸಕ ಕೆ.ಎಂ.ಉದಯ್ ಅವರು ಕಾಂಗ್ರೆಸ್ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಕೆ.ಎಂ. ಉದಯ್ ಮಾತನಾಡಿ ‘ಪಕ್ಷದ ಸಿದ್ಧಾಂತ, ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜನಪರ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ತಾಲ್ಲೂಕಿನ ಹಲವೆಡೆ ಬೇರೆ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ. ಸೇರ್ಪಡೆಗೊಂಡ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಶ್ರಮಿಸುವ ಮೂಲಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಗಮನಹರಿಸಬೇಕು’ ಎಂದರು.

ಮುಖಂಡ ಜಗದೀಶ್ ಮಾತನಾಡಿ, ‘ಕದಲೂರು ಉದಯ್ ಅವರು ಶಾಸಕರಾಗಿ ಆಯ್ಕೆಯಾದ ಮೂರು ವರ್ಷದಲ್ಲಿ ₹2,000 ಕೋಟಿಗಳಿಗೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಈ ಹಿಂದೆ ಇದ್ದ ಯಾವುದೇ ಶಾಸಕರು ಮಾಡಿರದಷ್ಟು ಅಭಿವೃದ್ಧಿ ಕೆಲಸಗಳನ್ನು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಮಾಡುತ್ತಿರುವುದರಿಂದ ಪ್ರೇರಿತರಾಗಿ, ಅವರ ಅಭಿವೃದ್ಧಿ ಕೆಲಸಗಳನ್ನು ಒಪ್ಪಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸಂದರ್ಶ್, ಮನ್ಮುಲ್ ನಿರ್ದೇಶಕ ಹರೀಶ್, ಪುರಸಭಾ ಮಾಜಿ ಸದಸ್ಯರಾದ ಸಚಿನ್, ಸಿದ್ದರಾಜು, ಮುಖಂಡರಾದ ಕೃಷ್ಣಪ್ಪ, ಪ್ರಕಾಶ್, ಉಮೇಶ್, ತಿಮ್ಮಯ್ಯ, ಆರಿಫ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-40-343086559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.