ಮದ್ದೂರು (ಮಂಡ್ಯ ಜಿಲ್ಲೆ): ನೆರೆಮನೆ ಮಹಿಳೆಯನ್ನು ಬೆದರಿಸಿ ಚಿನ್ನ, ವಜ್ರಾಭರಣಗಳನ್ನು ದೋಚಿ ತಲೆಮರೆಸಿಕೊಂಡಿದ್ದ ಆರೋಪದ ಮೇರೆಗೆ ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ಮರಿಗೌಡ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ದೊಡ್ಡಿಬೀದಿಯ ನಿವಾಸಿ ಆರೋಪಿಯು ಆ. 26ರಂದು ನೆರೆಮನೆಯ ನಿವಾಸಿ, ಇಂಡೇನ್ ಗ್ಯಾಸ್ ಏಜೆನ್ಸಿ ಮಾಲೀಕರಾದ ಚಂದ್ರಶೇಖರ್ ಅವರ ಪತ್ನಿ ಸುಶೀಲಮ್ಮ ಬೆದರಿಸಿ ಕೃತ್ಯ ಎಸಗಿದ್ದ. ಮಹಿಳೆಯು ಪಟ್ಟಣ ಠಾಣೆಗೆ ದೂರು ನೀಡಿದ್ದರು.

ಸಂತ್ರಸ್ತರ ಮನೆಯ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳ ಆಧಾರದಲ್ಲಿ ವಿಚಾರಣೆ ನಡೆಸಿದ್ದರು. ಆರೋಪಿ ತಪ್ಪೊಪ್ಪಿಕೊಂಡಿದ್ದು, ಮಳವಳ್ಳಿ, ಮದ್ದೂರಿನ ಗಿರವಿ ಅಂಗಡಿಗಳಲ್ಲಿ ಅಡವಿಟ್ಟಿದ್ದ ₹15 ಲಕ್ಷ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.