ಮದ್ದೂರು: ಮೇ 6ರಂದು ನಗರದ ರೈಲ್ವೆ ನಿಲ್ದಾಣಕ್ಕೆ ಸಮೀಪದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರ ನಡುವೆ ಗಲಾಟೆ ಸಂಭವಿಸಿ ಇಬ್ಬರಿಗೆ ಚಾಕು ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಹಿರಿಯ ಪೊಲೀಸ್ ಅಧಿಕಾರಿಗಳು ಬುಧವಾರ ಮದ್ದೂರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ದಕ್ಷಿಣ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ತಾರಾ ಫಾತಿಮಾ, ಡಿವೈಎಸ್ಪಿ ಸತೀಶ್ ಕುಮಾರ್, ಇನ್ಸ್ಪೆಕ್ಟರ್ ಚೇತನ್, ರೈಲ್ವೆ ಸುರಕ್ಷತಾ ದಳದ ಅಸಿಸ್ಟೆಂಟ್ ಕಮಿಷನರ್ ನಾರಾಯಣ ಸ್ವಾಮಿ ಹಾಗೂ ಸಿಬ್ಬಂದಿ ನಗರದ ಚನ್ನೇಗೌಡನದೊಡ್ಡಿ ಬಳಿ ಸ್ಥಳ ಪರಿಶೀಲನೆ ನಡೆಸಿದರು.

ನಂತರ ಚಾಕು ಇರಿತದಿಂದ ಗಾಯಗೊಂಡು ಮಂಡ್ಯದ ಮಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈಲ್ವೆ ಗೇಟ್ ಕೀಪರ್ ಕುಮಾರ್ ಹಾಗೂ ಶಿವಕುಮಾರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಚಾಕುವಿನಿಂದ ಹಲ್ಲೆ ನಡೆಸಿ ಸಾರ್ವಜನಿಕರಿಂದ ಧರ್ಮದೇಟು ತಿಂದು ಚಿಕಿತ್ಸೆ ಪಡೆಯುತ್ತಿರುವ ಮೈಸೂರಿನ ಗೌಸಿಯಾ ನಗರದ ನಿವಾಸಿಗಳಾದ ಸೂಯೆಜ್, ವಾಸಿಮ್ ಹಾಗೂ ಖುರೇಶಿ ಅವರನ್ನೂ ಭೇಟಿ ಮಾಡಿ ವಿಚಾರಣೆ ನಡೆಸಿದರು. ಘಟನೆ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-1565222765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.