ಮದ್ದೂರು: ಮದ್ದೂರಿನ ಗ್ರಾಮದೇವತೆ, ಶಕ್ತಿ ದೇವತೆಯಾಗಿರುವ ಮದ್ದೂರಮ್ಮನವರ ಜಾತ್ರಾ ಮಹೋತ್ಸವದಲ್ಲಿ ಬುಧವಾರ ಕೊಂಡ ಮಹೋತ್ಸವ ನಡೆಯಿತು. 50 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಕೊಂಡೋತ್ಸವವನ್ನು ಕಣ್ತುಂಬಿಕೊಂಡರು. ಗುರುವಾರ ಸಿಡಿ ಮಹೋತ್ಸವ ನಡೆಯಲಿದೆ.

ಜಾತ್ರೆಯ ಅಂಗವಾಗಿ ಏಪ್ರಿಲ್ 25 ರಿಂದ 30ರವರೆಗೆ ದನಗಳ ಜಾತ್ರೆಯೂ ನಡೆದಿತ್ತು. ಈ ಬಾರಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಶಾಸಕ ಕೆ.ಎಂ. ಉದಯ್ ಅವರು ರಾಸುಗಳ ಸ್ಪರ್ಧೆ ಆಯೋಜಿಸಿದ್ದರಿಂದ ಜಾತ್ರೆಯ ಸೊಬಗು ಇಮ್ಮಡಿಗೊಂಡಿತ್ತು.

ಮೇ 5ರಂದು ಬೆಳಿಗ್ಗೆ 10.30 ಗಂಟೆಗೆ ಮದ್ದೂರಮ್ಮ ಮಠಮನೆ ದೇವಸ್ಥಾನದಲ್ಲಿ ಹೋಮ, ಹವನ ಕಾರ್ಯ, 2.30ಕ್ಕೆ ಯಲ್ಲಮ್ಮ ದೇವಿಯವರಿಗೆ ಚಂದ್ರಭಂಡಾರ ಸೇವೆ, ಸಂಜೆ 4 ಗಂಟೆಗೆ ಗ್ರಾಮಸ್ಥರಿಂದ ಕೊಂಡ ಬಂಡಿ ಉತ್ಸವವು ಪ್ರಮುಖ ಬೀದಿಗಳಲ್ಲಿ ನಡೆಯಿತು.

ಸಂಜೆ 6.30ಕ್ಕೆ ಮದ್ದೂರಮ್ಮನವರ ಮೂಲ ದೇಗುಲದಲ್ಲಿ ಅಭಿಷೇಕ, ಹೋಮ, ಹವನ ಹಾಗೂ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ರಾತ್ರಿ 11.30ಕ್ಕೆ ಕೊಂಡಕ್ಕೆ ಅಗ್ನಿಸ್ಪರ್ಶ ಪೂಜೆ ಮಾಡಲಾಯಿತು.

ಬುಧವಾರ ಜೇಷ್ಠ ನಕ್ಷತ್ರ ಶುಭ ಬ್ರಾಹ್ಮಿ ಮಹೂರ್ತದಲ್ಲಿ ಬೆಳಿಗ್ಗೆ 6 ಗಂಟೆಗೆ ಮದ್ದೂರಮ್ಮನವರ ಕೊಂಡೋತ್ಸವ ನಡೆಯಿತು. ಸಂಜೆ 4.30ಕ್ಕೆ ಹೆಣ್ಣು ಮಕ್ಕಳಿಂದ ಮದ್ದೂರಮ್ಮ ದೇವಿಗೆ ಹಾಲರವಿ ಸೇವೆ ನಡೆಯಿತು.

ಮೇ 7ರಂದು ಸಂಜೆ 4ರ ನಂತರ ಮಠ ಮನೆಯಿಂದ ಭಕ್ತರಿಂದ ಬಾಯಿ ಬೀಗ ಸಮೇತ ಸಿಡಿರಣ್ಣನವರ ಸಿಡಿ ಉತ್ಸವವು ಅದ್ದೂರಿಯಾಗಿ ನಡೆಯಲಿದೆ. ಮೇ 8ರಂದು ಸಂಜೆ 4 ಗಂಟೆಗೆ ಮದ್ದೂರಮ್ಮನವರ ಓಕುಳಿ ಸೇವೆ, ಸಂಜೆ 6.30 ಗಂಟೆಗೆ ಉಯ್ಯಾಲೆ ಉತ್ಸವ, ರಾತ್ರಿ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-40-346302679

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.