ಮಂಡ್ಯ: ‘ಮೈಷುಗರ್ ಕಾರ್ಖಾನೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಸಂಪೂರ್ಣ ತನಿಖೆ ನಡೆಸಬೇಕು. ಕಬ್ಬಿನ ಬಾಕಿ ಹಣವನ್ನು ರೈತರಿಗೆ ಸುಮಾರು ₹1.40 ಕೋಟಿ ನೀಡಬೇಕು ಎಂದು ಆಗ್ರಹಿಸಿ ಹಸಿರು ಸೇನೆ, ರೈತ ಸಂಘ ಕಾರ್ಯಕರ್ತರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ನಗರದ ಜೆ.ಸಿ. ವೃತ್ತದಲ್ಲಿ ಶನಿವಾರ ಪ್ರತಿಭಟನಾ ಧರಣಿ ನಡೆಸಿದರು.

ತನಿಖೆಗೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚಿಸಬೇಕು. ಕಬ್ಬು ಪೂರೈಕೆ ಮಾಡಿರುವ ರೈತರಿಗೆ ಕೊಡಬೇಕಿರುವ ಹಣವನ್ನು ತಕ್ಷಣ ನೀಡಬೇಕು. ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ನಿಲ್ಲಿಸಿ ಹಲವು ತಿಂಗಳಾಗಿದೆ. ಆದರೂ ಸ್ವಚ್ಛತೆ ಹಾಗೂ ದುರಸ್ತಿ ಕೆಲಸವಾಗಿಲ್ಲ. ಇನ್ನಾದರೂ ಸ್ವಚ್ಛತೆ ಹಾಗೂ ದುರಸ್ತಿಗೆ ಕ್ರಮ ವಹಿಸಬೇಕು ಎಂದು ಆಗ್ರಹಪಡಿಸಿದರು.

ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನೇಮಕವಾಗಿರುವ ಸಮಿತಿಯಲ್ಲಿ ಜಿಲ್ಲೆಯ ಯಾವುದೇ ರೈತ ಪ್ರತಿನಿಧಿಗಳಿಲ್ಲ. ಇದಲ್ಲದೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮೈಷುಗರ್ ಕಾರ್ಖಾನೆ ಅಧ್ಯಕ್ಷ ಹಾಗೂ ಎಂ.ಡಿ. ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸದೆ ನಿಷ್ಟಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಬೇಕು. ಕಾರ್ಖಾನೆಯಲ್ಲಿ ಬಹುಕೋಟಿ ಹಗರಣಕ್ಕೆ ಕಾರಣರಾದ ಈ ಹಿಂದಿನ ಅಧ್ಯಕ್ಷ ನಾಗರಾಜಪ್ಪ ಅವರ ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ ನೀಡಿದ್ದರೂ ಈವರೆಗೆ ಆಸ್ತಿ ಮುಟ್ಟುಗೋಲಿಗೆ ಸರ್ಕಾರ ಆದೇಶ ಹೊರಡಿಸಿಲ್ಲ. ಅಧಿಕಾರಿಗಳು ಹಾಗೂ ಕಾರ್ಖಾನೆಯ ಅಧ್ಯಕ್ಷರ ಭ್ರಷ್ಟಾಚಾರದಿಂದ ಕಾರ್ಖಾನೆ ನಷ್ಟದ ಹಾದಿಯಲ್ಲಿದೆ. ಜಿಲ್ಲೆಯ ಶಾಸಕರಿಗೆ ಕಾರ್ಖಾನೆ ಕುರಿತು ಯಾವುದೆ ಕಾಳಜಿ ಇಲ್ಲವಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಬನ್ನೂರು ನಾರಾಯಣ, ಮುಖಂಡರಾದ ಕೆ.ಬೋರಯ್ಯ, ಬೂದನೂರು ಪುಟ್ಟಸ್ವಾಮಿ, ಕೀಳಘಟ್ಟ ನಂಜುಂಡಯ್ಯ, ಮಂಜೇಶ್ಗೌಡ, ಎಂ.ಬಿ. ನಾಗಣ್ಣಗೌಡ, ಎಸ್.ಕೆ. ರಾಜುಗೌಡ, ರಾಜೇಂದ್ರ, ಎಂ.ಎನ್. ಚಂದ್ರು, ಸಾತನೂರು ವೇಣುಗೋಪಾಲ್ ಭಾಗವಹಿಸಿದ್ದರು.

ಶ್ವೇತಪತ್ರ ಹೊರಡಿಸಲು ಆಗ್ರಹ

ರೈತ ಮುಖಂಡರಾದ ಸುನಂದಾ ಜಯರಾಂ ಮಾತನಾಡಿ ‘ಕಾರ್ಖಾನೆಯ ಆಗು ಹೋಗುಗಳ ಸಂಬಂಧ ಶ್ವೇತಪತ್ರ ಹೊರಡಿಸಬೇಕು. ಮೈಷುಗರ್ ಕಾರ್ಖಾನೆಯ ಸರ್ವ ಸದಸ್ಯರ ಸಭೆ ನಡೆಸಿಲ್ಲ. ಅನಗತ್ಯ ನೇಮಕಾತಿ ಜತೆಗೆ ಸಿವಿಲ್ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. ಈ ಎಲ್ಲದರ ಕುರಿತು ಕ್ರಮ ವಹಿಸದೇ ಸರ್ಕಾರ ನಿರ್ಲಕ್ಷ್ಯ ವಹಿಸಿದ ಪರಿಣಾಮ ಕಾರ್ಖಾನೆಯನ್ನು ಖಾಸಗೀಕರಿಸುವ ಹುನ್ನಾರಕ್ಕೆ ದೂಡಲಾಗುತ್ತಿದೆ’ ಎಂದು ದೂರಿದರು. ರೈತ ಸಂಘದ ಜಿಲ್ಲಾ ಘಕಟದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ ಮಾತನಾಡಿ ‘ಅಧ್ಯಕ್ಷರು ಸಾರ್ವಜನಿಕ ಆಡಳಿತದ ಲವಲೇಷ ತಿಳಿಯದವರು. ಆಡಳಿತದ ಚುಕ್ಕಾಣಿಯಲ್ಲಿದ್ದಾರೆ. ಸರ್ಕಾರ ಮಧ್ಯಪ್ರವೇಶಿಸಿ ಭ್ರಷ್ಟರನ್ನು ಆಚೆಗಟ್ಟಿ ಕಾರ್ಖಾನೆಯನ್ನು ಸರಿದಾರಿಗೆ ತರಬೇಕಿದೆ. ಇಲ್ಲದಿದ್ದರೆ ಹಳ್ಳಿಗಳಲ್ಲಿ ಜನಾಂದೋಲನಾ ರೂಪಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.