ಮಳವಳ್ಳಿ: ತಾಲ್ಲೂಕಿನ ಸಾಹಳ್ಳಿ ಮತ್ತು ಹಾಡ್ಲಿ ರಸ್ತೆಯಲ್ಲಿ ಬುಧವಾರ ಸಂಜೆ ನಿಯಂತ್ರಣ ತಪ್ಪಿ ಬೈಕ್ ನಾಲೆಗೆ ಉರುಳಿ ಬಿದ್ದು ಸವಾರ ಸಾಹಳ್ಳಿಯ ರಮೇಶ್(44) ಮೃತಪಟ್ಟಿದ್ದಾರೆ.

ಬುಧವಾರ ಸಂಜೆ ಸಾಹಳ್ಳಿ ಮತ್ತು ಹಾಡ್ಲಿ ನಡುವಿನ ನಾಲಾ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಮೇಶ್ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಗುರುವಾರ ಶವಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ರಮೇಶ್ ಅವರು ಸಾಮಾಜಿಕ ನಾಟಕಗಳ ನಿರ್ದೇಶನದ ಹೆಸರುವಾಸಿಯಾಗಿದ್ದರು. ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ. ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-40-1027457381

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.