ಮಂಡ್ಯ: ಮಳವಳ್ಳಿ ತಾಲ್ಲೂಕಿನ ಭಗವಾನ್ ಬುದ್ಧ ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ ವತಿಯಿಂದ ಆಟೊ ಚಾಲಕರಿಗೆ ಸಮವಸ್ತ್ರ ವಿತರಣೆ, ಸಂಸ್ಥೆಯ ವಾರ್ಷಿಕ ಸ್ಮರಣ ಸಂಚಿಕೆ ಬಿಡುಗಡೆ ಸೇರಿ ಹಲವು ಕಾರ್ಯಕ್ರಮ ಜೂ.1ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಎನ್.ಬಾಲಸುಬ್ರಹ್ಮಣ್ಯ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ಸಂಸ್ಥೆಯ ಕಾಲೇಜು ಆವರಣದಲ್ಲಿ ಅಧ್ಯಕ್ಷ ಯಮದೂರು ಸಿದ್ದರಾಜು ಅವರ ಹುಟ್ಟುಹಬ್ಬದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯರಾದ ಕೆ.ವಿವೇಕಾನಂದ, ಮಧು ಜಿ.ಮಾದೇಗೌಡ ಚಾಲನೆ ನೀಡುವರು. ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಕಟ್ಟಡಗಳನ್ನು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸುವರು. ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಆಟೊ ಚಾಲಕರಿಗೆ ಸಮವಸ್ತ್ರ ವಿತರಿಸುವರು. ಕೊಳ್ಳೇಗಾಲ ಜೇತವನ ಬುದ್ಧವಿಹಾರದ ಮನೋರಖ್ಖಿತ ಭಂತೇಜಿ ಸಾನ್ನಿಧ್ಯ ವಹಿಸುವರು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-40-77331684

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.