ಹಲಗೂರು: ‘ಮಳವಳ್ಳಿ ತಾಲ್ಲೂಕಿನಾದ್ಯಂತ ಶಿಕ್ಷಣ, ಆರೋಗ್ಯ ಮತ್ತು ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ವರ್ಗದ ಜನರಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲು ಹಂತ ಹಂತವಾಗಿ ಶ್ರಮಿಸುವೆ’ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ ನೀಡಿದರು.

ಹೋಬಳಿಯ ವಿವಿಧ ಗ್ರಾಮಗಳಲ್ಲಿ ₹5 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮತ್ತು ದೇವಾಲಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಈಗಾಗಲೇ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಸಮುದಾಯಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗಿದೆ. ಇಂದು ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸಾಮಾನ್ಯ ವರ್ಗದ ಬೀದಿಗಳಿಗೆ ಅಗತ್ಯವಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ತಂದು ಹಂತ ಹಂತವಾಗಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ಕುಂತೂರು ಗೋಪಾಲ್, ಎಚ್.ಕೆ.ಕೃಷ್ಣಮೂರ್ತಿ, ದೇವಿರಹಳ್ಳಿ ಕುಮಾರ್, ಬ್ಯಾಡರಹಳ್ಳಿ ರವಿಕುಮಾರ್, ಬಾಳೆಹೊನ್ನಿಗ ಕುಮಾರ್, ರಾಮಲಿಂಗ ನಾಯಕ್, ಚಂದ್ರಕುಮಾರ್, ಮೋಹನ್ ಕುಮಾರ್, ಅನಿಲ್ ಕುಮಾರ್, ಮರಿಸ್ವಾಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-40-853106809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.