ಮಳವಳ್ಳಿ: ಪಟ್ಟಣದ ಪೇಟೆ ಒಕ್ಕಲಿಗೇರಿಯ ಲೇಟ್ ಕೆಂಪರಾಜು ಎಂಬುವರ ಪುತ್ರ ರೈತ ಎಂ.ಕೆ.ಹೃತೀಕ್ (25) ಸಾಲಬಾಧೆಯಿಂದ ಬುಧವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೃತೀಕ್ ವ್ಯವಸಾಯಕ್ಕಾಗಿ ಮಳವಳ್ಳಿಯ ಪಿಎಲ್ಡಿ ಬ್ಯಾಂಕ್ ಸೇರಿ ಹಲವೆಡೆ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಕಳೆದ ಕೆಲ ವರ್ಷಗಳಿಂದ ವ್ಯವಸಾಯದಲ್ಲಿ ನಷ್ಟ ಅನುಭವಿಸಿದ್ದರು. ಬುಧವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಪಟ್ಟಣದ ಹೊರವಲಯದ ನಿಡಘಟ್ಟ ಬಳಿಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

ಮೃತ ರೈತನ ತಾಯಿ ಸುನಂದ ದೂರು ನೀಡಿದ್ದು, ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿ ಕರೋಟಿ ಗ್ರಾಮದ ವೆಂಕಟೇಶ್ ಅವರ ಪುತ್ರ ದೇವರಾಜು (45) ಎಂಬುವವರು ಸಾಲಭಾದೆಯಿಂದ ಪಟ್ಟಣದ ದೇವಿರಮ್ಮಣ್ಣಿ ಕೆರೆಗೆ ಬಿದ್ದು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಬ್ಬು, ಭತ್ತ ಕೃಷಿ ಮಾಡುತ್ತಿದ್ದ ದೇವರಾಜು ವಿವಿಧ ಸಂಘ ಸಂಸ್ಥೆ ಸೇರಿ ಖಾಸಗಿ ವ್ಯಕ್ತಿಗಳಿಂದ ₹10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು. ಸಾಲ ಮರುಪಾವತಿ ಮಾಡಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಸದಸ್ಯರು ದೂರಿನಲ್ಲಿ ತಿಳಿಸಿದ್ದಾರೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕುಟುಂಬಕ್ಕೆ ಆಧಾರವಾಗಿದ್ದ ದೇವರಾಜು ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-40-143680091

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.