ಮಂಡ್ಯ: ‘ಮಳವಳ್ಳಿ ತಾಲ್ಲೂಕಿನ ಡಿ.ಹಲಸಹಳ್ಳಿ ಗ್ರಾಮದ ಷಡಕ್ಷರಿ ಮಠ, ದಾಸೋಹ ಮಠ, ಮಹಾಕವಿ ಷಡಕ್ಷರದೇವ ಮಂಗಳ ಮಂಟಪದ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ರಾಜಗೋಪುರ ಮತ್ತು ಬಸವ ಮಹಾದ್ವಾರ ಲೋಕಾರ್ಪಣೆ ಕಾರ್ಯಕ್ರಮವು ಮೇ 1ರಂದು ನಡೆಯಲಿದೆ’ ಎಂದು ಬಸವೇಶ್ವರ ಕೇಂದ್ರದ ತಾಲ್ಲೂಕು ಘಟಕದ ಅಧ್ಯಕ್ಷ ಚನ್ನಪ್ಪ ತಿಳಿಸಿದರು.

ಕನಕಪುರ ದೇಗುಲ ಮಠಾಧ್ಯಕ್ಷ ಮುಮ್ಮಡಿ ನಿರ್ವಾಣ ಸ್ವಾಮೀಜಿ ಹಾಗೂ ಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ಏ.27ರಿಂದ 29ರವರೆಗೆ ಮಠದಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಲಿವೆಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮೇ 1ರಂದು ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಗವಿಸಿದ್ದೇಶ್ವರ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು..

ಬಿ.ಎಸ್. ಯಡಿಯೂರಪ್ಪ ಧಾರ್ಮಿಕ ಸಭೆ ಉದ್ಘಾಟಿಸುವರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜಗೋಪುರವನ್ನು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಷಡಕ್ಷರದೇವ ಮಂಗಳ ಮಂಟಪವನ್ನು, ಶಾಸಕ ಎಂ.ಕೃಷ್ಣಪ್ಪ ದಾಸೋಹ ಭವನವನ್ನು, ಶಾಸಕ ಪ್ರಿಯಾಕೃಷ್ಣ ಷಡಕ್ಷರಿ ಗವಿಮಠವನ್ನು ಉದ್ಘಾಟಿಸುವರು.

ಗೋಷ್ಠಿಯಲ್ಲಿ ಎಚ್.ಅಶೋಕ್, ಎಂ.ಪಿ.ಬಸವರಾಜು, ನಾಗರಾಜು, ಕುಮಾರ್, ಅಶೋಕ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-40-377887001

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.